1. {ಸೌಲನು ಯೇಸುವಿನ ಶಿಷ್ಯನಾದದ್ದು} PS ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;
|
2. ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.
|
4. ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು. PEPS
|
7. ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು.
|
8. ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.
|
10. ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.
|
11. ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.
|
12. ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ” ಎಂದು ಹೇಳಿದನು.
|
13. ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.
|
14. ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.
|
15. ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.
|
17. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.
|
18. ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು. PEPS
|
21. ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.
|
22. ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು. PEPS
|
24. ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.
|
25. ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು. PEPS
|
26. ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.
|
27. ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.
|
28. ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು.
|
29. ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.
|
30. ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. PEPS
|
31. ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು. PS
|
32. {ಐನೇಯನು ವಾಸಿಯಾದದ್ದು} PS ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದ್ದದಲ್ಲಿ ವಾಸವಾಗಿದ್ದ ದೇವಜನರ ಬಳಿಗೂ ಬಂದನು.
|
33. ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
|
34. ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.
|
35. ಮತ್ತು ಲುದ್ದದಲ್ಲಿಯೂ, ಶಾರೋನಿನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು. PS
|
36. {ಸತ್ತುಹೋಗಿದ್ದ ದೊರ್ಕಳೆಂಬ ಒಬ್ಬ ಶಿಷ್ಯಳನ್ನು ಬದುಕಿಸಿದ್ದು} PS ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
|
38. ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು.
|
39. ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.
|
40. ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.
|
41. ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.
|