1.
2. [PS]ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು. [PE]{#1ಯೆಹೋವನ ಗರ್ಜನೆ } [PS]ಆಮೋಸನು ಹೀಗೆ ಪ್ರಕಟಿಸಿದನು, [PE][QS]“ಯೆಹೋವನು ಚೀಯೋನಿನಿಂದ ಗರ್ಜಿಸಿ, [QE][QS]ಯೆರೂಸಲೇಮಿನಿಂದ ಧ್ವನಿಗೈಯುವನು. [QE][QS]ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. [QE][QS]ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.” [QE]
3. {#1ದಮಸ್ಕದ ಪಾಪಕ್ಕೆ ದಂಡನೆ } [QS]ಯೆಹೋವನು ಇಂತೆನ್ನುತ್ತಾನೆ, [QE][QS]“ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, [QE][QS]ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. [QE][QS]ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ. [QE]
4. [QS]ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು. [QE][QS]ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು. [QE]
5. [QS]ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು [QE][QS]ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು[* ನಿವಾಸಿಗಳನ್ನು ಅಥವಾ ಸಿಂಹಾಸನರೂಢನಾಗಿರುವವನನ್ನು. ] ಮತ್ತು [QE][QS]ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; [QE][QS]ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” [QE][QS]ಇದು ಯೆಹೋವನ ನುಡಿ. [QE]
6. {#1ಫಿಲಿಷ್ಟಿಯದ ಪಾಪಕ್ಕೆ ಆದ ದಂಡನೆ } [QS]ಯೆಹೋವನು ಇಂತೆನ್ನುತ್ತಾನೆ, [QE][QS]“ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, [QE][QS]ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, [QE][QS]ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು. [QE]
7. [QS]ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, [QE][QS]ಅದು ಅದರ ಅರಮನೆಗಳನ್ನು ನುಂಗಿಬಿಡುವುದು. [QE]
8. [QS]ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ [QE][QS]ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. [QE][QS]ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, [QE][QS]ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” [QE][QS]ಇದು ಕರ್ತನಾದ ಯೆಹೋವನ ನುಡಿ. [QE]
9. {#1ತೂರಿನ ಪಾಪಕ್ಕೆ ಆದ ದಂಡನೆ } [QS]ಯೆಹೋವನು ಇಂತೆನ್ನುತ್ತಾನೆ: [QE][QS]“ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, [QE][QS]ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. [QE][QS]ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, [QE][QS]ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು. [QE]
10. [QS]ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, [QE][QS]ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.” [QE]
11. {#1ಎದೋಮಿನ ಪಾಪಕ್ಕೆ ಆದ ದಂಡನೆ } [QS]ಯೆಹೋವನು ಇಂತೆನ್ನುತ್ತಾನೆ: [QE][QS]“ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, [QE][QS]ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. [QE][QS]ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, [QE][QS]ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. [QE][QS]ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, [QE][QS]ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು. [QE]
12. [QS]ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, [QE][QS]ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.” [QE]
13. {#1ಅಮ್ಮೋನಿನ ಪಾಪಕ್ಕೆ ಆದ ದಂಡನೆ } [QS]ಯೆಹೋವನು ಇಂತೆನ್ನುತ್ತಾನೆ, [QE][QS]“ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, [QE][QS]ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. [QE][QS]ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು [QE][QS]ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು. [QE]
14. [QS]ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, [QE][QS]ಅದು ಅದರ ಅರಮನೆಗಳನ್ನು ನುಂಗಿಬಿಡುವುದು; [QE][QS]ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, [QE][QS]ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು. [QE]
15. [QS]ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.” [QE][QS]ಇದು ಯೆಹೋವನ ನುಡಿ. [QE]