1. {#1ಮೋವಾಬಿನ ಪಾಪಕ್ಕೆ ಆದ ದಂಡನೆ } [PS]ಯೆಹೋವನು ಇಂತೆನ್ನುತ್ತಾನೆ, [PE][QS]“ಮೋವಾಬಿನವರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, [QE][QS]ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. [QE][QS]ಅದು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಬೂದಿಮಾಡಿತು. [QE]
2. [QS]ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, [QE][QS]ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವುದು. [QE][QS]ಭಟರು ಘೋಷಿಸಿ ಕೊಂಬೂದುವ ಯುದ್ಧದ ಕೋಲಾಹಲದಲ್ಲಿ, [QE][QS]ಮೋವಾಬು ಸಾಯುವುದು; [QE]
3. [QS]ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ, [QE][QS]ಸಕಲ ರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು.” [QE][QS]ಇದು ಯೆಹೋವನ ನುಡಿ. [QE]
4. {#1ಯೆಹೂದದ ಪಾಪಕ್ಕೆ ಆದ ದಂಡನೆ } [PS]ಯೆಹೋವನು ಇಂತೆನ್ನುತ್ತಾನೆ, [PE][QS]“ಯೆಹೂದವು ಮೂರು ದ್ರೋಹಗಳನ್ನು, [QE][QS]ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, [QE][QS]ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. [QE][QS]ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. [QE][QS]ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. [QE][QS]ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, [QE][QS]ಇವರನ್ನು ದಾರಿ ತಪ್ಪುವಂತೆ ಮಾಡಿದವು. [QE]
5. [QS]ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. [QE][QS]ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.” [QE]
6. {#1ಇಸ್ರಾಯೇಲಿನ ಪಾಪಕ್ಕೆ ಆದ ದಂಡನೆ } [PS]ಯೆಹೋವನು ಇಂತೆನ್ನುತ್ತಾನೆ, [PE][QS]“ಇಸ್ರಾಯೇಲರು ಮೂರು ದ್ರೋಹಗಳನ್ನು, [QE][QS]ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, [QE][QS]ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. [QE][QS]ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, [QE][QS]ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು. [QE]
7. [QS]ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, [QE][QS]ದೀನರ ದಾರಿಗೆ ಅಡ್ಡ ಹಾಕುತ್ತಾರೆ. [QE][QS]ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ. [QE]
8. [QS]ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; [QE][QS]ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ. [QE]
9. [QS]ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, [QE][QS]ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, [QE][QS]ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. [QE][QS]ಆದರೂ ಮರದ ಮೇಲಿನ ಅದರ ಫಲವನ್ನು, [QE][QS]ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು. [QE]
10. [QS]ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, [QE][QS]ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, [QE][QS]ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು. [QE]
11. [QS]ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ [QE][QS]ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. [QE][QS]ಇಸ್ರಾಯೇಲಿನ ಜನರೇ, [QE][QS]ಇದು ಸತ್ಯವಲ್ಲವೋ?” [QE][QS]ಎಂದು ಯೆಹೋವನು ಅನ್ನುತ್ತಾನೆ. [QE]
12. [QS]“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ [QE][QS]ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ. [QE]
13. [QS]ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ [QE][QS]ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು. [QE]
14. [QS]ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. [QE][QS]ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. [QE][QS]ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು. [QE]
15. [QS]ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲಲಾರನು, [QE][QS]ಪಾದತ್ವರಿತನು ತಪ್ಪಿಸಿಕೊಳ್ಳಲಾರನು, [QE][QS]ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು. [QE]
16. [QS]ಆ ದಿನದಲ್ಲಿ ಶೂರರಲ್ಲಿ ಧೀರನಾದವನು [QE][QS]ಬೆತ್ತಲೆಯಾಗಿ ಓಡಿಹೋಗುವನು” ಇದು ಯೆಹೋವನ ನುಡಿ. [QE]