1. {#1ಸಮಾರ್ಯದ ಸ್ತ್ರೀಯರ ಖಂಡನೆ } [PS]ಸಮಾರ್ಯ ಬೆಟ್ಟದಲ್ಲಿನ, [PE][QS]ಬಾಷಾನಿನ[* ಬಾಷಾನಿನ ಅಂದರೆ ಬಹಳ ಫಲವತ್ತಾದ ಭೂಮಿ. ] ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, [QE][QS]ಬಡವರನ್ನು ಹಿಂಸಿಸಿ, [QE][QS]ದಿಕ್ಕಿಲ್ಲದವರನ್ನು ಜಜ್ಜಿ, [QE][QS]ನೀವು ನಿಮ್ಮ ಪತಿಗಳಿಗೆ, [QE][QS]“ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ. [QE]
2. [QS]ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: [QE][QS]“ಇಗೋ ನಿಮ್ಮನ್ನು ಕೊಂಡಿಗಳಿಂದಲೂ, [QE][QS]ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, [QE][QS]ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ. [QE]
3. [QS]ಗೋಡೆಯಲ್ಲಿಯ ಬಿರುಕುಗಳ ಮೂಲಕ, [QE][QS]ಪ್ರತಿಯೊಬ್ಬ ಸ್ತ್ರೀಯೂ ನೇರವಾಗಿ ತನ್ನ ಮುಂದೆಯೇ ಹೊರಟು ಹೋಗುವಳು, [QE][QS]ಹರ್ಮೋನಿನ[† ಹರ್ಮೋನಿನ ಅಂದರೆ ಕಸವನ್ನು ಎಸೆಯುವ ತಿಪ್ಪೆಗೆ. ] ದಿಕ್ಕಿನ ಕಡೆಗೆ ತಳ್ಳಲ್ಪಡುವಿರಿ” [QE][QS]ಇದು ಯೆಹೋವನ ನುಡಿ. [QE]
4. {#1ಕೇವಲ ಆಚಾರಗಳು ವ್ಯರ್ಥ } [PS]“ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, [PE][QS]ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. [QE][QS]ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, [QE][QS]ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ. [QE]
5. [QS]ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ. [QE]
6. {#1ಸನ್ಮಾರ್ಗಕ್ಕೆ ಬಾರದವರಿಗೆ ಹೆಚ್ಚು ದಂಡನೆಯು ಅವಶ್ಯ } [PS]“ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ [PE][QS]ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. [QE][QS]ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” [QE][QS]ಇದು ಯೆಹೋವನ ನುಡಿ. [QE]
7. [QS]“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, [QE][QS]ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, [QE][QS]ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. [QE][QS]ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. [QE][QS]ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು. [QE]
8. [QS]ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, [QE][QS]ಬಾಯಾರಿಕೆ ತೀರಲಿಲ್ಲ. [QE][QS]ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” [QE][QS]ಇದು ಯೆಹೋವನ ನುಡಿ.
9. “ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. [QE][QS]ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, [QE][QS]ಅಂಜೂರದ ಗಿಡಗಳನ್ನು, [QE][QS]ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. [QE][QS]ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” [QE][QS]ಇದು ಯೆಹೋವನು ನುಡಿ. [QE]
10. [QS]“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. [QE][QS]ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, [QE][QS]ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, [QE][QS]ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ [QE][QS]ಬಡಿಯುವಂತೆ ಮಾಡಿದೆನು. [QE][QS]ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” [QE][QS]ಇದು ಯೆಹೋವನ ನುಡಿ. [QE]
11. [QS]“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, [QE][QS]ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. [QE][QS]ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. [QE][QS]ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” [QE][QS]ಇದು ಯೆಹೋವನು ನುಡಿ. [QE]
12. [QS]“ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; [QE][QS]ನಾನು ಮಾಡಬೇಕೆಂದಿರುವುದರಿಂದ, [QE][QS]ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ! [QE]
13. [QS]ಇಗೋ, ಪರ್ವತಗಳನ್ನು ರೂಪಿಸಿ, [QE][QS]ಗಾಳಿಯನ್ನು ನಿರ್ಮಿಸಿ, [QE][QS]ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, [QE][QS]ಉದಯವನ್ನು ಅಂಧಕಾರವನ್ನಾಗಿ ಮಾಡಿ [QE][QS]ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” [QE][QS]ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ. [QE]