1. {ಮಾಗಿದ ಹಣ್ಣಿನ ದರ್ಶನ} PS ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ * ಮಾಗಿದ ಹಣ್ಣಿನ ಅತ್ತಿಹಣ್ಣು. ಪುಟ್ಟಿಯನ್ನು ಕಂಡೆನು!
|
2. ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು,
“ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ. |
3. ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು”
ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!” |
4. {ಧನವಂತರ ಹಣದಾಸೆ ಮುಂದಿನ ದೌರ್ಭಾಗ್ಯ} PS “ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು?
ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ. |
5. ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ;
ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ? |
7. ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
|
8. ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ,
ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು. |
9. ಆ ದಿನದಲ್ಲಿ
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು. |
10. ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು
ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು. |
11. ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
“ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ. |
12. ಸಮುದ್ರದಿಂದ ಸಮುದ್ರಕ್ಕೆ;
ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ. |
14. ‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ
‘ಮತ್ತು ಬೇರ್ಷೆಬದ ಮಾರ್ಗದ † ಬೇರ್ಷೆಬದ ಮಾರ್ಗದ ಅಂದರೆ ವಿಗ್ರಹಗಳನ್ನು ಆರಾಧಿಸುವುದು. ಜೀವದಾಣೆ’ ” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು. PE |