1. {#1ಮಾಗಿದ ಹಣ್ಣಿನ ದರ್ಶನ } [PS]ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ[* ಮಾಗಿದ ಹಣ್ಣಿನ ಅತ್ತಿಹಣ್ಣು. ] ಪುಟ್ಟಿಯನ್ನು ಕಂಡೆನು!
2. ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, [PE][QS]“ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. [QE][QS]ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ. [QE]
3. [QS]ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” [QE][QS]ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, [QE][QS]“ಆಗ ಹೆಣಗಳು ಹೆಚ್ಚುವವು, [QE][QS]ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!” [QE]
4. {#1ಧನವಂತರ ಹಣದಾಸೆ ಮುಂದಿನ ದೌರ್ಭಾಗ್ಯ } [QS]“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? [QE][QS]ಧಾನ್ಯವನ್ನು ಮಾರಬೇಕಲ್ಲಾ; [QE][QS]ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? [QE][QS]ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; [QE][QS]ಕೊಳಗವನ್ನು ಕಿರಿದುಮಾಡೋಣ; [QE][QS]ಬಡವರನ್ನು ನುಂಗುವವರೇ, [QE][QS]ತೊಲವನ್ನು ಹೆಚ್ಚಿಸೋಣ; [QE][QS]ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; [QE][QS]ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ. [QE]
5. [QS]ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; [QE][QS]ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ? [QE]
6. [QS]ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, [QE][QS]ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ! [QE]
7.
8. [PS]ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ” [PE][QS]ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, [QE][QS]ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? [QE][QS]ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, [QE][QS]ಐಗುಪ್ತದ ನದಿಯ ಹಾಗೆಯೇ, [QE][QS]ಇಳಿದು ಹೋಗುವುದು. [QE]
9. [QS]ಆ ದಿನದಲ್ಲಿ [QE][QS]ಕರ್ತನಾದ ಯೆಹೋವನು ಇಂತೆನ್ನುತ್ತಾನೆ, [QE][QS]“ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, [QE][QS]ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು. [QE]
10. [QS]ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು [QE][QS]ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. [QE][QS]ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, [QE][QS]ತಲೆಬೋಳಿಸಿಕೊಳ್ಳುವಂತೆ ಮಾಡುವೆನು. [QE][QS]ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, [QE][QS]ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು. [QE]
11. [QS]ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, [QE][QS]“ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, [QE][QS]ಅದು ಅನ್ನದ ಕ್ಷಾಮವಲ್ಲ, [QE][QS]ನೀರಿನ ಕ್ಷಾಮವಲ್ಲ, [QE][QS]ಯೆಹೋವನ ವಾಕ್ಯಗಳ ಕ್ಷಾಮವೇ. [QE]
12. [QS]ಸಮುದ್ರದಿಂದ ಸಮುದ್ರಕ್ಕೆ; [QE][QS]ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು [QE][QS]ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, [QE][QS]ಆದರೂ ಅದು ಸಿಕ್ಕುವುದಿಲ್ಲ. [QE]
13. [QS]ಆ ದಿನದಲ್ಲಿ ಸುಂದರವಾದ ಯುವತಿಯರೂ [QE][QS]ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು. [QE]
14. [QS]‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ [QE][QS]‘ಮತ್ತು ಬೇರ್ಷೆಬದ ಮಾರ್ಗದ[† ಬೇರ್ಷೆಬದ ಮಾರ್ಗದ ಅಂದರೆ ವಿಗ್ರಹಗಳನ್ನು ಆರಾಧಿಸುವುದು. ] ಜೀವದಾಣೆ’ ” ಎಂದೂ ಹೇಳುವರು. [QE][QS]ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, [QE][QS]ಅವರು ಬಿದ್ದು ಮತ್ತೆ ಮೇಲೆ ಏಳಲಾರರು. [QE]