1. {#1ಪೀಠಿಕೆ } [PS] [* 1 ಕೊರಿ 1:1 ]ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ [† 2 ಕೊರಿ 1:1 ]ಅಪೊಸ್ತಲನಾಗಿರುವ ಪೌಲನೂ ಮತ್ತು [‡ 2 ಕೊರಿ 1:1; ಕೊಲೊ 1:1; ಫಿಲೆ. 1; ಇಬ್ರಿ. 13:23 ]ಸಹೋದರನಾದ ತಿಮೊಥೆಯನು,
2. ಕೊಲೊಸ್ಸೆಯಲ್ಲಿರುವ [§ ಎಫೆ 1:1; ಫಿಲಿ. 1:1 ]ದೇವಜನರಿಗೆ ಹಾಗು ಕ್ರಿಸ್ತನಲ್ಲಿ [* ನಂಬುವವರಾದ ]ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, [† ರೋಮಾ. 1:7; ಎಫೆ 1:2 ]ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ. [PE]
3. {#1ಕೃತಜ್ಞತಾಸ್ತುತಿ ಮತ್ತು ಪ್ರಾರ್ಥನೆ } [PS]ನಿಮಗೋಸ್ಕರ [‡ ಎಫೆ 1:15, 16; ಫಿಲಿ. 4:5 ]ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
4. ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.
5. [§ 2 ತಿಮೊ. 4:8; 1 ಪೇತ್ರ. 1:4; ಕೊಲೊ 1:23; ಅ. ಕೃ. 23:6 ]ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.
6. ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ [* ಯೋಹಾ 15:5-16; ಫಿಲಿ. 1:11 ]ಫಲಕೊಟ್ಟಂತೆ [† ಕೊಲೊ 1:23; ಕೀರ್ತ 98:3; ಮತ್ತಾ 24:14 ]ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.
7. ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ [‡ ಕೊಲೊ 4:12; ಫಿಲೆ. 23 ]ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.
8. [§ ರೋಮಾ. 15:30 ]ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ. [PE]
9. [PS]ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ [* 2 ಥೆಸ. 1:11 ]ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ [† ಕೊಲೊ 4:5; ಎಫೆ 1:8 ]ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
10. [‡ ಎಫೆ 1:17 ]ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, [§ 2 ಕೊರಿ 5:9; ಎಫೆ 5:10 ]ಸಕಲ ಸತ್ಕಾರ್ಯಗಳಲ್ಲಿ [* ಎಫೆ 4:1 ]ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,
11. [† ಎಫೆ 3:6,17 ]ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ [‡ ಎಫೆ 4:2 ]ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,
12. ದೇವಭಕ್ತರಿಗಾಗಿ [§ ಅ. ಕೃ. 26:18 ]ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.
13. ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ [* ಎಫೆ 1:6 ]ಪ್ರಿಯ ಕುಮಾರನ [† 2 ಪೇತ್ರ. 1:11 ]ಸಾಮ್ರಾಜ್ಯಕ್ಕೆ ಸೇರಿಸಿದನು.
14. [‡ ಎಫೆ 1:7 ]ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು. [PE]
15. {#1ಕ್ರಿಸ್ತನ ಉತ್ಕೃಷ್ಟತೆ } [PS]ಕ್ರಿಸ್ತನು [§ 1 ತಿಮೊ 1:17 ]ಅದೃಶ್ಯನಾದ ದೇವರ [* 2 ಕೊರಿ 4:4 ]ಪ್ರತಿರೂಪನೂ, ಸೃಷ್ಟಿಗೆಲ್ಲಾ [† ಕೀರ್ತ 89:27; ಜ್ಞಾ. 8:24-31; ರೋಮಾ. 8:29 ಸೃಷ್ಟಿಗೆಲ್ಲಾ ಶ್ರೇಷ್ಠನೂ ಆಗಿದ್ದಾನೆ. ]ಜೇಷ್ಠಪುತ್ರನೂ ಆಗಿದ್ದಾನೆ.
16. ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, [‡ ಎಫೆ 1:21 ]ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. [§ ಯೋಹಾ 1:3; ರೋಮಾ. 11:36; 1 ಕೊರಿ 8:6 ]ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.
17. [* ಯೋಹಾ 1:1; 8:58 ]ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.
18. [† ಎಫೆ 1:2-23 ]ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, [‡ ಪ್ರಕ 3:14 ]ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ [§ ಅ. ಕೃ. 26:23; 1 ಕೊರಿ 15:20; ಪ್ರಕ 1:5 ]ಮೊದಲು ಎದ್ದು ಬಂದವನು ಆತನೇ.
19. ಏಕೆಂದರೆ [* ಕೊಲೊ 2:9; ಯೋಹಾ 1:16; ಎಫೆ 1:23 ]ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,
20. ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ [† ಎಫೆ 2:14 ]ತಾನು ಸಮಾಧಾನವನ್ನುಂಟುಮಾಡಿ, [‡ 2 ಕೊರಿ 5:18; ಎಫೆ 1:10 ]ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು. [PE]
21. [PS]ಇದಲ್ಲದೆ [§ ಎಫೆ 2:12,21 ]ನೀವು ಪೂರ್ವದಲ್ಲಿ ಅನ್ಯರು ನಿಮ್ಮ [* ತೀತ 1:16 ]ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.
22. ಈಗಲಾದರೋ ದೇವರು ನಿಮ್ಮನ್ನು [† ರೋಮಾ. 7:4 ]ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, [‡ 1 ಕೊರಿ 1:8 ]ನಿರಪರಾಧಿಗಳನ್ನಾಗಿಯೂ [§ ಯೂದ. 24; ಎಫೆ 5:27 ]ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.
23. [* ಮಾರ್ಕ 16:15; ಅ. ಕೃ. 2:5 ]ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ [† ಕೊಲೊ 1:5,6 ]ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ. [PE]
24. {#1ಸಭೆಗಾಗಿ ಪೌಲನ ಸೇವೆ } [PS]ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. [‡ 2 ಕೊರಿ 1:5; 2 ತಿಮೊ. 1:8; 2:10 ]ಕ್ರಿಸ್ತನ [§ ಹಿಂಸೆ ]ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ [* ಎಫೆ 4:12 ]ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.
25. ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ [† ವ. 24 ನೋಡಿರಿ. ]ನಾನು ಸಭೆಗೆ ಸೇವಕನಾದೆನು. [‡ ಎಫೆ 3:2 ]ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.
26. [§ ಎಫೆ 3:9; ರೋಮಾ. 16:25-26 ]ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.
27. [* ಎಫೆ 1:18; 3:16-17 ]ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು [† ಕೊಲೊ 2:2 ]ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ [‡ 1 ತಿಮೊ. 1:1; ]ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.
28. ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ [§ ಮತ್ತಾ 5:48 ]ಪ್ರವೀಣರನ್ನಾಗಿ [* ವ. 22 ನೋಡಿರಿ. ]ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.
29. [† ಎಫೆ 1:19 ]ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ [‡ ಕೊಲೊ 2:1; 4:12 ]ಹೋರಾಡುತ್ತೇನೆ. [PE]