ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೊಲೊಸ್ಸೆಯವರಿಗೆ
1.
2. [PS]ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ. [PE]{#1ಪ್ರಾರ್ಥಿಸಲು ಉತ್ತೇಜನ } [PS] [* ವ. 2-4; ಎಫೆ 6:18-20 ]ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
3. ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ [† ಕೊಲೊ 4:18; ಎಫೆ 6:20; ಫಿಲಿ. 1:7 ]ನಾನು ಸೆರೆಯಲ್ಲಿದ್ದೇನಲ್ಲಾ.
4. ನಾನು ಆ [‡ ರೋಮಾ. 16:25 ]ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ.
5. ಸಮಯವನ್ನು ಸದುಪಯೋಗಿಸಿಕೊಂಡು [§ ಮಾರ್ಕ 4:11 ]ಹೊರಗಿನವರೊಂದಿಗೆ [* ಎಫೆ 5:15-17 ]ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.
6. ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ [† ಉಪ್ಪಾಗಿಯೂ ]ರುಚಿಕರವಾಗಿಯೂ ಇರಲಿ. [‡ 1 ಪೇತ್ರ 3:15 ]ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ. [PE]
7. {#1ವಂದನೆಗಳು ಹಾಗೂ ಕಡೆ ಮಾತುಗಳು } [PS] [§ ವ. 7-9; ಎಫೆ 6:21-22 ]ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.
8. ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ,
9. ಅವನನ್ನು ನಂಬಿಗಸ್ತನು ಮತ್ತು[* ಫಿಲೆ. 16 ] ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ [† ಫಿಲೆ. 10 ]ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು. [PE]
10. [PS]ನನ್ನ ಜೊತೆ ಸೆರೆಯವನಾದ [‡ ಅ. ಕೃ. 19:29; 20:4; 7:2; ಫಿಲೆ. 24 ]ಅರಿಸ್ತಾರ್ಕನೂ ಮತ್ತು [§ ಅ. ಕೃ. 15:37-39 ]ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. [* ಅ. ಕೃ. 12:12 ]ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.
11. ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. [† ಅ. ಕೃ. 11:2 ]ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.
12. ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ [‡ ಕೊಲೊ 1:7; ಫಿಲೆ. 23 ]ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು [§ ಮತ್ತಾ 5:48 ]ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.
13. ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ.
14. ಪ್ರಿಯ ವೈದ್ಯನಾಗಿರುವ [* 2 ತಿಮೊ. 4:11; ಅ. ರು. 16:10 ]ಲೂಕನು ಮತ್ತು [† 2 ತಿಮೊ. 4:10; ಫಿಲೆ. 24 ]ದೇಮನು ನಿಮಗೆ ವಂದನೆ ಹೇಳುತ್ತಾರೆ.
15. ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ [‡ ರೋಮಾ. 16:5 ]ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ. [PE]
16. [PS]ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.
17. [§ ಫಿಲೆ. 2 ]ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.
18. [* 1 ಕೊರಿ 16:21 ]ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. [† ಫಿಲಿ. 1:7; ಕೊಲೊ 4:3; ಇಬ್ರಿ. 13:3 ]ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. [‡ 1 ತಿಮೊ. 6:21; 2 ತಿಮೊ. 4:22; ತೀತ. 3:15; ಇಬ್ರಿ. 13:25 ]ಕೃಪೆಯು ನಿಮ್ಮೊಂದಿಗಿರಲಿ.[PE]
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 4
1 2 3 4
1 2 ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ. ಪ್ರಾರ್ಥಿಸಲು ಉತ್ತೇಜನ * ವ. 2-4; ಎಫೆ 6:18-20 ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. 3 ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ಕೊಲೊ 4:18; ಎಫೆ 6:20; ಫಿಲಿ. 1:7 ನಾನು ಸೆರೆಯಲ್ಲಿದ್ದೇನಲ್ಲಾ. 4 ನಾನು ಆ ರೋಮಾ. 16:25 ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ. 5 ಸಮಯವನ್ನು ಸದುಪಯೋಗಿಸಿಕೊಂಡು § ಮಾರ್ಕ 4:11 ಹೊರಗಿನವರೊಂದಿಗೆ * ಎಫೆ 5:15-17 ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ. 6 ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ಉಪ್ಪಾಗಿಯೂ ರುಚಿಕರವಾಗಿಯೂ ಇರಲಿ. ‡ 1 ಪೇತ್ರ 3:15 ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ. ವಂದನೆಗಳು ಹಾಗೂ ಕಡೆ ಮಾತುಗಳು 7 § ವ. 7-9; ಎಫೆ 6:21-22 ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು. 8 ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ, 9 ಅವನನ್ನು ನಂಬಿಗಸ್ತನು ಮತ್ತು* ಫಿಲೆ. 16 ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ † ಫಿಲೆ. 10 ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು. 10 ನನ್ನ ಜೊತೆ ಸೆರೆಯವನಾದ ಅ. ಕೃ. 19:29; 20:4; 7:2; ಫಿಲೆ. 24 ಅರಿಸ್ತಾರ್ಕನೂ ಮತ್ತು § ಅ. ಕೃ. 15:37-39 ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. * ಅ. ಕೃ. 12:12 ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ. 11 ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಅ. ಕೃ. 11:2 ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು. 12 ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಕೊಲೊ 1:7; ಫಿಲೆ. 23 ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು § ಮತ್ತಾ 5:48 ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ. 13 ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ. 14 ಪ್ರಿಯ ವೈದ್ಯನಾಗಿರುವ * 2 ತಿಮೊ. 4:11; ಅ. ರು. 16:10 ಲೂಕನು ಮತ್ತು † 2 ತಿಮೊ. 4:10; ಫಿಲೆ. 24 ದೇಮನು ನಿಮಗೆ ವಂದನೆ ಹೇಳುತ್ತಾರೆ. 15 ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ರೋಮಾ. 16:5 ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ. 16 ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ. 17 § ಫಿಲೆ. 2 ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ. 18 * 1 ಕೊರಿ 16:21 ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. † ಫಿಲಿ. 1:7; ಕೊಲೊ 4:3; ಇಬ್ರಿ. 13:3 ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ‡ 1 ತಿಮೊ. 6:21; 2 ತಿಮೊ. 4:22; ತೀತ. 3:15; ಇಬ್ರಿ. 13:25 ಕೃಪೆಯು ನಿಮ್ಮೊಂದಿಗಿರಲಿ.
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 4
1 2 3 4
×

Alert

×

Kannada Letters Keypad References