1. {ಪಸ್ಕಹಬ್ಬ} PS ನೀವು * ಇಬ್ರಿಯ ಪದ ಅಬೀಬ್. ಅಬೀಬ್ ಮಾಸವು ಇಬ್ರಿಯ ಕ್ಯಾಲೆಂಡರಿನ ವರ್ಷದ ಮೊದಲ ಮಾಸವಾಗಿದ್ದು, ಅಧುನಿಕ ಕಾಲದ ಮಾರ್ಚ್ ಮತ್ತು ಏಪ್ರಿಲ್ ಗೆ ಸಮಾನವಾಗಿದೆ. ಇದನ್ನು ನಿಸಾನ್ ಎಂದು ಕರೆಯುತ್ತಾರೆ. ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.
|
2. ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.
|
3. ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.
|
4. ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು. PEPS
|
6. ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.
|
8. ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು. PS
|
10. ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
|
11. ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
|
13. {ಪರ್ಣಶಾಲೆಗಳ ಹಬ್ಬ} PS ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
|
14. ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
|
15. ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು. PEPS
|
16. ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.
|
18. {ನ್ಯಾಯಾಧಿಪತಿಗಳ ನೇಮಕ} PS ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು. PEPS
|
19. ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
|
20. ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. PS
|
21. {ವಿಗ್ರಹಾರಾಧನೆಯನ್ನು ಮಾಡಬಾರದು} PS ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.
|