1. ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ. PEPS
|
2. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,
|
3. ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,
|
4. ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,
|
6. ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.
|
7. ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. PS
|
8. {ನ್ಯಾಯವಿಚಾರಣೆಯ ಕ್ರಮ} PS ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.
|
9. ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.
|
10. ಯೆಹೋವನು ಆರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.
|
11. ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.
|
12. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
|
14. {ಅರಸನನ್ನು ನೇಮಿಸುವ ವಿಷಯ} PS ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,
|
15. ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು. PEPS
|
16. ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. * ಬಹಳ ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ದಾಸರನ್ನಾಗಿ ಕಳುಹಿಸಿ ವಿನಿಮಯ ಮಾಡಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
|
17. ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು. PEPS
|
18. ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.
|
19. ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು.
|
20. ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು. PE
|