1. {ಯಾಜಕರಿಗೆ ಸಲ್ಲಬೇಕಾದ ಕಾಣಿಕೆಗಳ ವಿಷಯ} PS ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.
|
2. ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು. PEPS
|
3. ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.
|
4. ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.
|
5. ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ. PEPS
|
6. ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಆರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು,
|
7. ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ,
|
8. ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು. PS
|
9. {ಅಸಹ್ಯವಾದ ಆಚಾರವಿಚಾರಗಳು} PS ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.
|
11. ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.
|
12. ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.
|
14. ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ. PS
|
15. {ಪ್ರವಾದಿಯನ್ನು ಕಳುಹಿಸುವ ವಾಗ್ದಾನ} PS ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.
|
16. ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.
|
18. ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.
|
20. ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.
|
22. ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು. PE
|