1. {ಯುದ್ಧಕ್ರಮ} PS ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ. PEPS
|
3. “ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.
|
4. ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು. PEPS
|
5. ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.
|
6. ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.
|
7. ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು.
|
8. ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.
|
10. ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.
|
11. ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.
|
13. ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.
|
14. ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.
|
16. ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.
|
17. ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.
|
18. ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು. PEPS
|
19. ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?
|
20. ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು. PE
|