1. {ಸಿಕ್ಕಿದ ವಸ್ತುಗಳನ್ನು ಹಿಂತಿರುಗಿ ಕೊಡಬೇಕೆಂಬ ವಿಧಿ} PS ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.
|
2. ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಆ ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.
|
3. ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು. PEPS
|
4. ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು. PS
|
5. {ವಿಧವಿಧವಾದ ನೇಮಗಳು} PS ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು. PEPS
|
6. ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.
|
8. ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು. PEPS
|
9. ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು * ಅಥವಾ ಗತಿಕೇಡಾಗುವುದು ಅಥವಾ ಪರಿಶುದ್ಧಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. ದೇವರಿಗೆ ಸಮರ್ಪಿಸಬೇಕು.
|
13. {ಹೆಂಡತಿಯನ್ನು ಪರಿತ್ಯಾಗಮಾಡುವವನ ವಿಷಯದಲ್ಲಿ ಕ್ರಮ} PS ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ,
|
14. “ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,
|
15. ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.
|
17. ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ” ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು.
|
19. ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ. PS
|
20. {ದುರಾಚಾರಿಯಾದ ಸ್ತ್ರೀಗೆ ಆಗಬೇಕಾದ ಶಿಕ್ಷೆ} PS ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,
|
21. ಅವಳು † ಅಥವಾ ತಂದೆಯ ಮನೆಯಲ್ಲೇ. ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು. PS
|
22. {ಪರಸ್ತ್ರೀಯನ್ನು ಮಾನಭಂಗಪಡಿಸಿದವನಿಗೆ ಆಗಬೇಕಾದ ಶಿಕ್ಷೆ} PS ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು. PEPS
|
24. ನೀವು ಅವರಿಬ್ಬರನ್ನೂ ಊರುಬಾಗಲಿನ ಹೊರಕ್ಕೆ ತರಿಸಿ ಅವರನ್ನು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. PEPS
|
25. ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.
|
26. ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.
|
29. ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ. PS
|
30. {ಮಲತಾಯಿಯ ಸಂಗನಿಷೇಧ} PS ‡ ತಂದೆಯ ಯಾವುದೇ ಹೆಂಡತಿಯನ್ನು. ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು. PE
|