ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
1. {ಸಿಕ್ಕಿದ ವಸ್ತುಗಳನ್ನು ಹಿಂತಿರುಗಿ ಕೊಡಬೇಕೆಂಬ ವಿಧಿ} [PS] ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.
2. ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಆ ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.
3. ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು. [PE][PS]
4. ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು. [PS]
5. {ವಿಧವಿಧವಾದ ನೇಮಗಳು} [PS] ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು. [PE][PS]
6. ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.
7. ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ. [PE][PS]
8. ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು. [PE][PS]
9. ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು [* ಅಥವಾ ಗತಿಕೇಡಾಗುವುದು ಅಥವಾ ಪರಿಶುದ್ಧಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.] ದೇವರಿಗೆ ಸಮರ್ಪಿಸಬೇಕು.
10. ಎತ್ತನ್ನೂ ಮತ್ತು ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಿ ಉಳಬಾರದು.
11. ನಾರು ಹಾಗು ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು. [PE][PS]
12. ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು. [PS]
13. {ಹೆಂಡತಿಯನ್ನು ಪರಿತ್ಯಾಗಮಾಡುವವನ ವಿಷಯದಲ್ಲಿ ಕ್ರಮ} [PS] ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ,
14. “ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,
15. ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.
16. ಆ ಸ್ತ್ರೀಯ ತಂದೆ ಅವರಿಗೆ, “ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ
17. ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ” ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು.
18. ಆ ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು.
19. ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ. [PS]
20. {ದುರಾಚಾರಿಯಾದ ಸ್ತ್ರೀಗೆ ಆಗಬೇಕಾದ ಶಿಕ್ಷೆ} [PS] ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,
21. ಅವಳು [† ಅಥವಾ ತಂದೆಯ ಮನೆಯಲ್ಲೇ.] ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು. [PS]
22. {ಪರಸ್ತ್ರೀಯನ್ನು ಮಾನಭಂಗಪಡಿಸಿದವನಿಗೆ ಆಗಬೇಕಾದ ಶಿಕ್ಷೆ} [PS] ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು. [PE][PS]
23. ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗಮಿಸಿದರೆ,
24. ನೀವು ಅವರಿಬ್ಬರನ್ನೂ ಊರುಬಾಗಲಿನ ಹೊರಕ್ಕೆ ತರಿಸಿ ಅವರನ್ನು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. [PE][PS]
25. ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.
26. ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.
27. ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.
28. ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗಮಿಸಿದ್ದು ತಿಳಿದು ಬಂದರೆ,
29. ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ. [PS]
30. {ಮಲತಾಯಿಯ ಸಂಗನಿಷೇಧ} [PS] [‡ ತಂದೆಯ ಯಾವುದೇ ಹೆಂಡತಿಯನ್ನು.] ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು. [PE]

Notes

No Verse Added

Total 34 Chapters, Current Chapter 22 of Total Chapters 34
ಧರ್ಮೋಪದೇಶಕಾಂಡ 22:60
1. {ಸಿಕ್ಕಿದ ವಸ್ತುಗಳನ್ನು ಹಿಂತಿರುಗಿ ಕೊಡಬೇಕೆಂಬ ವಿಧಿ} PS ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.
2. ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.
3. ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು. PEPS
4. ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು. PS
5. {ವಿಧವಿಧವಾದ ನೇಮಗಳು} PS ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು. PEPS
6. ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.
7. ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ. PEPS
8. ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು. PEPS
9. ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ತೋಟದ ಎಲ್ಲಾ ಬೆಳೆಯನ್ನು * ಅಥವಾ ಗತಿಕೇಡಾಗುವುದು ಅಥವಾ ಪರಿಶುದ್ಧಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. ದೇವರಿಗೆ ಸಮರ್ಪಿಸಬೇಕು.
10. ಎತ್ತನ್ನೂ ಮತ್ತು ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಿ ಉಳಬಾರದು.
11. ನಾರು ಹಾಗು ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು. PEPS
12. ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು. PS
13. {ಹೆಂಡತಿಯನ್ನು ಪರಿತ್ಯಾಗಮಾಡುವವನ ವಿಷಯದಲ್ಲಿ ಕ್ರಮ} PS ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ,
14. “ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,
15. ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.
16. ಸ್ತ್ರೀಯ ತಂದೆ ಅವರಿಗೆ, “ನಾನು ನನ್ನ ಮಗಳನ್ನು ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ
17. ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ” ಎಂದು ಹೇಳಿ ಅವಳ ಹೊದಿಕೆಯನ್ನು ಊರಿನ ಹಿರಿಯರ ಮುಂದೆ ಇಡಬೇಕು.
18. ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು.
19. ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ. PS
20. {ದುರಾಚಾರಿಯಾದ ಸ್ತ್ರೀಗೆ ಆಗಬೇಕಾದ ಶಿಕ್ಷೆ} PS ಆದರೆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,
21. ಅವಳು ಅಥವಾ ತಂದೆಯ ಮನೆಯಲ್ಲೇ. ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು. PS
22. {ಪರಸ್ತ್ರೀಯನ್ನು ಮಾನಭಂಗಪಡಿಸಿದವನಿಗೆ ಆಗಬೇಕಾದ ಶಿಕ್ಷೆ} PS ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು. PEPS
23. ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗಮಿಸಿದರೆ,
24. ನೀವು ಅವರಿಬ್ಬರನ್ನೂ ಊರುಬಾಗಲಿನ ಹೊರಕ್ಕೆ ತರಿಸಿ ಅವರನ್ನು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. PEPS
25. ಆದರೆ ಪುರುಷನು ನಿಶ್ಚಿತಳಾದ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.
26. ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.
27. ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.
28. ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗಮಿಸಿದ್ದು ತಿಳಿದು ಬಂದರೆ,
29. ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ. PS
30. {ಮಲತಾಯಿಯ ಸಂಗನಿಷೇಧ} PS ತಂದೆಯ ಯಾವುದೇ ಹೆಂಡತಿಯನ್ನು. ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು. PE
Total 34 Chapters, Current Chapter 22 of Total Chapters 34
×

Alert

×

kannada Letters Keypad References