1. {ಸಭೆಯಿಂದ ಬಹಿಷ್ಕಾರ ಮಾಡುವುದರ ವಿಷಯ} PS ಬೀಜಹೊಡಿಸಿಕೊಂಡವರು * ಬೀಜಹೊಡಿಸಿಕೊಂಡವರು ವೀರ್ಯನಾಶ. ಅಥವಾ ರಹಸ್ಯಾಂಗವನ್ನು † ರಹಸ್ಯಾಂಗವನ್ನು ಜನನೇಂದ್ರಿಯ. ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು.
|
3. ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.
|
4. ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.
|
5. ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.
|
7. ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.
|
9. {ಯುದ್ಧಕಾಲದಲ್ಲಿ ಪಾಳೆಯವು ನಿರ್ಮಲವಾಗಿರಬೇಕೆಂಬ ನಿಯಮ} PS ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.
|
13. ಯುದ್ಧದ ಸಾಮಾನುಗಳಲ್ಲದೆ ನಿಮ್ಮ ಬಳಿಯಲ್ಲಿ ಸಲಿಕೆ ಇರಬೇಕು; ನೀವು ಬಹಿರ್ಭೂಮಿಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.
|
14. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು. PS
|
15. {ತಪ್ಪಿಸಿಕೊಂಡ ದಾಸರನ್ನು ದಣಿಗೆ ವಶಪಡಿಸಬಾರದೆಂಬ ವಿಧಿ} PS ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.
|
16. ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು. PS
|
17. {ವ್ಯಭಿಚಾರ ನಿಷಿದ್ಧವಾದದ್ದು} PS ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.
|
18. ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ. PS
|
19. {ಸ್ವದೇಶದವನಿಂದ ಬಡ್ಡಿ ತೆಗೆದುಕೊಳ್ಳಬಾರದೆಂಬ ವಿಧಿ} PS ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.
|
20. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು. PS
|
21. {ಹರಕೆಯನ್ನು ನೆರವೇರಿಸಬೇಕೆಂಬ ವಿಧಿ} PS ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.
|
23. ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು. PS
|
24. {ಮತ್ತೊಬ್ಬನ ಬೆಳೆಯ ವಿಷಯದಲ್ಲಿ ನಡೆದುಕೊಳ್ಳತಕ್ಕ ಕ್ರಮ} PS ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು.
|
25. ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು. PE
|