1. {ಪರಿತ್ಯಾಗಮಾಡಿದ ಹೆಂಡತಿಯನ್ನು ಪುನಃ ಪರಿಗ್ರಹಿಸಬಾರದು} PS ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.
|
3. ಆಕೆ ಎರಡನೆಯ ಗಂಡನಿಂದಲೂ ತಿರಸ್ಕರಿಸಲ್ಪಟ್ಟು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ,
|
4. ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು. PS
|
5. {ಹೊಸದಾಗಿ ಮದುವೆಮಾಡಿಕೊಂಡವರ ನಿಯಮ} PS ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ. PS
|
6. {ವಿವಿಧ ನಿಯಮಗಳು ಮತ್ತು ಸುಧಾರಣೆಗಳು} PS ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು. PEPS
|
7. ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು. PEPS
|
8. ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.
|
9. ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ. PEPS
|
12. ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತುಮುಣುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು.
|
13. ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು. PEPS
|
15. ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ. PEPS
|
16. ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು. PEPS
|
17. ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.
|
18. ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ. PEPS
|
19. ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
|
20. ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
|
22. ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ. PE
|