1. {ಕಲ್ಲಿನ ಕಂಬಗಳ ಮೇಲೆ ಕೆತ್ತಿಸಬೇಕಾದ ಧರ್ಮಶಾಸ್ತ್ರವಾಕ್ಯಗಳು} PS ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.
|
2. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.
|
3. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ * ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.
|
4. ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು. PEPS
|
7. ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
|
9. ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, “ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ.
|
10. ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು. PS
|
12. “ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.
|
13. ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು. PEPS
|
15. ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’ ” ಅನ್ನಬೇಕು. PEPS
|
16. “ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. PEPS
|
19. “ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. PEPS
|
20. “ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. PEPS
|
22. “ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. PEPS
|
25. “ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು. PEPS
|
26. “ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. PE
|