1. {ದೇವರನ್ನು ಪ್ರೀತಿಸಬೇಕೆಂಬ ಆಜ್ಞೆ} PS ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.
|
2. ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.
|
3. ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ * ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು. PEPS
|
5. ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. PEPS
|
7. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
|
10. ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ
|
11. ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,
|
13. ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.
|
15. ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು. PEPS
|
18. ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
|
20. ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ
|
21. ನೀವು ಅವರಿಗೆ, “ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು.
|
22. ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,
|
23. ತಾನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವುದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು.
|
24. ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.
|
25. ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು. PE
|