1. {ಸ್ಮರಿಸಿರಿ ಮತ್ತು ವಿಧೇಯರಾಗಿರಿ} PS ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
|
2. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.
|
3. ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.
|
5. ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.
|
7. ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.
|
8. ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.
|
9. ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.
|
10. ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು. PS
|
11. {ದೇವರನ್ನು ಮರೆಯಬಾರದೆಂಬ ಎಚ್ಚರಿಕೆ} PS ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.
|
15. ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.
|
16. ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು
|
18. ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.
|
19. ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.
|
20. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ. PE
|