1. {ದೇವರ ಕೃಪೆಯಿಂದಲೇ ವಿಜಯ} PS ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.
|
2. ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.
|
3. ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ. PEPS
|
4. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.
|
5. ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.
|
6. ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ. PS
|
7. {ಬಂಗಾರದ ಬಸವನ ಮೂರ್ತಿ} PS ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.
|
8. ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.
|
9. ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.
|
10. ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.
|
11. ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;
|
12. ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.
|
14. ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.
|
15. ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ
|
16. ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.
|
17. ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು. PEPS
|
18. ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.
|
19. ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.
|
20. ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದದಲ್ಲಿ ಪ್ರಾರ್ಥಿಸಿದೆನು.
|
21. ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ. PEPS
|
23. ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.
|
24. * ಅಥವಾ ಯೆಹೋವನಿಗೆ ನಿಮ್ಮ ಪರಿಚಯವಾದಂದಿನಿಂದಲೂ. ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ. PEPS
|
25. ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.
|
26. ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.
|
27. ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.
|
28. ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.
|