3. ಮಳೆ ತುಂಬಿದ ಮೋಡಗಳು,
ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು. |
4. ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ,
ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ. |
5. ಗಾಳಿಯ ಮಾರ್ಗವನ್ನೂ,
ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ. |
6. ಮುಂಜಾನೆ ಬೀಜ ಬಿತ್ತು;
ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು. |
7. {ಯೌವನದಲ್ಲಿ ಸೃಷ್ಟಿಕರ್ತನನ್ನು ಸ್ಮರಿಸು} PS ನಿಜವಾಗಿ ಬೆಳಕು ಇಂಪಾಗಿಯೂ,
ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು. |
8. ಬಹಳ ವರ್ಷ ಬದುಕುವವನು,
ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ. PEPS |
9. ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು,
ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು. |