ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಪ್ರಸಂಗಿ
1. {#1ನೀರಿನ ಮೇಲೆ ರೊಟ್ಟಿ } [PS]ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, [PE][QS2]ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು. [QE]
2. [QS]ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. [QE][QS2]ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ. [QE]
3. [QS]ಮಳೆ ತುಂಬಿದ ಮೋಡಗಳು, [QE][QS2]ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, [QE][QS]ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, [QE][QS2]ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು. [QE]
4. [QS]ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, [QE][QS2]ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ. [QE]
5. [QS]ಗಾಳಿಯ ಮಾರ್ಗವನ್ನೂ, [QE][QS2]ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, [QE][QS]ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, [QE][QS2]ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ. [QE]
6. [QS]ಮುಂಜಾನೆ ಬೀಜ ಬಿತ್ತು; [QE][QS2]ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, [QE][QS]ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, [QE][QS2]ಇಲ್ಲವೇ ಒಂದು ವೇಳೆ ಎರಡೂ [QE][QS2]ಒಳ್ಳೆಯದಾಗುವುದೋ ನಿನಗೆ ತಿಳಿಯದು. [QE]
7. {#1ಯೌವನದಲ್ಲಿ ಸೃಷ್ಟಿಕರ್ತನನ್ನು ಸ್ಮರಿಸು } [QS]ನಿಜವಾಗಿ ಬೆಳಕು ಇಂಪಾಗಿಯೂ, [QE][QS2]ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು. [QE]
8. [QS]ಬಹಳ ವರ್ಷ ಬದುಕುವವನು, [QE][QS2]ಅವುಗಳಲ್ಲೆಲ್ಲಾ ಆನಂದಿಸಲಿ, [QE][QS]ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, [QE][QS2]ಏಕೆಂದರೆ ಅವು ಬಹಳವಾಗಿರುವವು. [QE][QS]ಮುಂದಾಗುವುದೆಲ್ಲ ವ್ಯರ್ಥವೇ. [QE]
9. [PS]ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, [PE][QS2]ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. [QE][QS]ಮನಸ್ಸಿಗೆ ತಕ್ಕಂತೆಯೂ, [QE][QS2]ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. [QE][QS]ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು. [QE]
10. [QS]ನಿನ್ನ ಹೃದಯದಿಂದ ದುಃಖವನ್ನೂ, [QE][QS2]ದೇಹದಿಂದ ಶ್ರಮೆಯನ್ನೂ ತೊಲಗಿಸು, [QE][QS]ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ. [QE]
ಒಟ್ಟು 12 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 12
1 2 3 4 5 6 7 8 9 10 11 12
ನೀರಿನ ಮೇಲೆ ರೊಟ್ಟಿ 1 ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು. 2 ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ. 3 ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು. 4 ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ. 5 ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ. 6 ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು. ಯೌವನದಲ್ಲಿ ಸೃಷ್ಟಿಕರ್ತನನ್ನು ಸ್ಮರಿಸು 7 ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು. 8 ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ. 9 ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು. 10 ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.
ಒಟ್ಟು 12 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 12
1 2 3 4 5 6 7 8 9 10 11 12
×

Alert

×

Kannada Letters Keypad References