1. {ನೀರಿನ ಮೇಲೆ ರೊಟ್ಟಿ} [PS] ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, [QBR2] ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು. [QBR]
2. ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. [QBR2] ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ. [QBR]
3. ಮಳೆ ತುಂಬಿದ ಮೋಡಗಳು, [QBR2] ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, [QBR] ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, [QBR2] ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು. [QBR]
4. ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, [QBR2] ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ. [QBR]
5. ಗಾಳಿಯ ಮಾರ್ಗವನ್ನೂ, [QBR2] ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, [QBR] ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, [QBR2] ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ. [QBR]
6. ಮುಂಜಾನೆ ಬೀಜ ಬಿತ್ತು; [QBR2] ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, [QBR] ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, [QBR2] ಇಲ್ಲವೇ ಒಂದು ವೇಳೆ ಎರಡೂ [QBR2] ಒಳ್ಳೆಯದಾಗುವುದೋ ನಿನಗೆ ತಿಳಿಯದು.
7. {ಯೌವನದಲ್ಲಿ ಸೃಷ್ಟಿಕರ್ತನನ್ನು ಸ್ಮರಿಸು} [PS] ನಿಜವಾಗಿ ಬೆಳಕು ಇಂಪಾಗಿಯೂ, [QBR2] ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು. [QBR]
8. ಬಹಳ ವರ್ಷ ಬದುಕುವವನು, [QBR2] ಅವುಗಳಲ್ಲೆಲ್ಲಾ ಆನಂದಿಸಲಿ, [QBR] ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, [QBR2] ಏಕೆಂದರೆ ಅವು ಬಹಳವಾಗಿರುವವು. [QBR] ಮುಂದಾಗುವುದೆಲ್ಲ ವ್ಯರ್ಥವೇ. [PE][PS]
9. ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, [QBR2] ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. [QBR] ಮನಸ್ಸಿಗೆ ತಕ್ಕಂತೆಯೂ, [QBR2] ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. [QBR] ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು. [QBR]
10. ನಿನ್ನ ಹೃದಯದಿಂದ ದುಃಖವನ್ನೂ, [QBR2] ದೇಹದಿಂದ ಶ್ರಮೆಯನ್ನೂ ತೊಲಗಿಸು, [QBR] ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ. [PE]