ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಪ್ರಸಂಗಿ
1. [QS]ಕಷ್ಟದ ದಿನಗಳು ಬರುವುದಕ್ಕೆ ಮೊದಲು, [QE][QS2]“ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, [QE][QS2]ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, [QE][QS3]ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು. [QE]
2. [QS]ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, [QE][QS2]ಮಳೆಯ ಮೋಡಗಳು ಹಿಂತಿರುಗಿ ಬರುವವು. [QE]
3. [QS] [* ಇಲ್ಲಿ ಮನೆ ಮಾನವ ಶಾರೀರಿಕ ದೇಹವೆಂಬ, ಗಾವಲಿನವರು ಕೈಗಳೆಂಬ, ಬಲಿಷ್ಠರು ಕಾಲುಗಳೆಂಬ, ಅರೆಯುವವರು ಹಲ್ಲುಗಳೆಂಬ, ಮತ್ತು ನೋಡುವವರು ಕಣ್ಣುಗಳೆಂಬ ಅರ್ಥವನ್ನು ನೀಡುತ್ತದೆ. ಈ ಉದಾಹರಣೆಗಳು ಮರಣದ ಅರ್ಥವನ್ನು ಸಹ ತೋರಿಸುತ್ತವೆ ಎಂದು ಕೆಲವು ಪಂಡಿತರು ಹೇಳುತ್ತಾರೆ. ]ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, [QE][QS2]ಬಲಿಷ್ಠರು ಬಗ್ಗುವರು, [QE][QS]ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, [QE][QS2]ಕಿಟಕಿಗಳಿಂದ ನೋಡುವವರು ಮಂಕಾಗುವರು. [QE]
4. [QS]ಬೀದಿಯ ಬಾಗಿಲುಗಳು ಮುಚ್ಚಿರುವವು, [QE][QS2]ಅರೆಯುವ ಶಬ್ದವು ನಿಲ್ಲುವುದು, [QE][QS]ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, [QE][QS2]ಗಾಯಕಿಯರೆಲ್ಲಾ ಕುಗ್ಗುವರು. [QE]
5. [QS]ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, [QE][QS2]ಮತ್ತು ದಾರಿಯಲ್ಲಿ ಅಪಾಯ, [QE][QS]ಬಾದಾಮಿಯ ಮರವು ಹೂ ಬಿಡುವುದು, [QE][QS2]ಮಿಡತೆಯು ಕೂಡಾ ಭಾರವಾಗಿರುವುದು, [QE][QS2]ಆಶೆಯು ಕುಂದುವುದು. [QE][QS]ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, [QE][QS2]ಗೋಳಾಟದವರು ಬೀದಿಯಲ್ಲಿ ತಿರುಗುವರು. [QE]
6. [QS]ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, [QE][QS2]ಚಿನ್ನದ ಬಟ್ಟಲು ಜಜ್ಜಿಹೋಗುವುದು, [QE][QS2]ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, [QE][QS2]ಬಾವಿಯ ರಾಟೆ ಮುರಿಯುವುದು, [QE]
7. [QS]ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, [QE][QS2]ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ. [QE]
8. [QS]“ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ. [QE]
9. {#1ಸಮಾಪ್ತಿ }
10. [PS]ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು. [PE][PS]ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
11. ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ. [PE]
12.
13. [PS]ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ. [PE][QS]ವಿಷಯವು ತೀರಿತು, [QE][QS2]ಎಲ್ಲವೂ ಕೇಳಿ ಮುಗಿಯಿತು, [QE][QS]ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, [QE][QS2]ಮನುಷ್ಯರೆಲ್ಲರ ಕರ್ತವ್ಯವು ಇದೇ. [QE]
14. [QS]ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, [QE][QS2]ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, [QE][QS]ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.[QE]

ಟಿಪ್ಪಣಿಗಳು

No Verse Added

ಒಟ್ಟು 12 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 12
1 2 3 4 5 6 7 8 9 10 11 12
ಪ್ರಸಂಗಿ 12:27
1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, QS2 “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, QS2 ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, QS3 ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು. 2 ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, QS2 ಮಳೆಯ ಮೋಡಗಳು ಹಿಂತಿರುಗಿ ಬರುವವು. 3 * ಇಲ್ಲಿ ಮನೆ ಮಾನವ ಶಾರೀರಿಕ ದೇಹವೆಂಬ, ಗಾವಲಿನವರು ಕೈಗಳೆಂಬ, ಬಲಿಷ್ಠರು ಕಾಲುಗಳೆಂಬ, ಅರೆಯುವವರು ಹಲ್ಲುಗಳೆಂಬ, ಮತ್ತು ನೋಡುವವರು ಕಣ್ಣುಗಳೆಂಬ ಅರ್ಥವನ್ನು ನೀಡುತ್ತದೆ. ಈ ಉದಾಹರಣೆಗಳು ಮರಣದ ಅರ್ಥವನ್ನು ಸಹ ತೋರಿಸುತ್ತವೆ ಎಂದು ಕೆಲವು ಪಂಡಿತರು ಹೇಳುತ್ತಾರೆ. ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, QS2 ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, QS2 ಕಿಟಕಿಗಳಿಂದ ನೋಡುವವರು ಮಂಕಾಗುವರು. 4 ಬೀದಿಯ ಬಾಗಿಲುಗಳು ಮುಚ್ಚಿರುವವು, QS2 ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, QS2 ಗಾಯಕಿಯರೆಲ್ಲಾ ಕುಗ್ಗುವರು. 5 ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, QS2 ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, QS2 ಮಿಡತೆಯು ಕೂಡಾ ಭಾರವಾಗಿರುವುದು, QS2 ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, QS2 ಗೋಳಾಟದವರು ಬೀದಿಯಲ್ಲಿ ತಿರುಗುವರು. 6 ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, QS2 ಚಿನ್ನದ ಬಟ್ಟಲು ಜಜ್ಜಿಹೋಗುವುದು, QS2 ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, QS2 ಬಾವಿಯ ರಾಟೆ ಮುರಿಯುವುದು, 7 ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, QS2 ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ. 8 “ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ. 9 #1ಸಮಾಪ್ತಿ 10 ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು. ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು. 11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ. 12 13 ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ. ವಿಷಯವು ತೀರಿತು, QS2 ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, QS2 ಮನುಷ್ಯರೆಲ್ಲರ ಕರ್ತವ್ಯವು ಇದೇ. 14 ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, QS2 ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
ಒಟ್ಟು 12 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 12
1 2 3 4 5 6 7 8 9 10 11 12
Common Bible Languages
West Indian Languages
×

Alert

×

kannada Letters Keypad References