1. {ಲೋಕದ ಸುಖಸಂತೋಷ ವ್ಯರ್ಥವೇ} PS ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.
|
3. ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು. PEPS
|
7. ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.
|
8. ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು * ಸ್ತ್ರೀಯರನ್ನು ಅಥವಾ ಅನೇಕ ಸಂಗೀತ ಉಪಕರಣಗಳು ಅಥವಾ ಉಪಪತ್ನಿಯರನ್ನು. ಸಂಪಾದಿಸಿಕೊಂಡೆನು. PEPS
|
9. ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು. PEPS
|
10. ನನ್ನ ಕಣ್ಣು ಬಯಸಿದ್ದೆಲ್ಲವನ್ನು,
ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ. |
11. ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ,
ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ. |
12. {ಬುದ್ಧಿಹೀನತೆಗಿಂತ ಜ್ಞಾನವು ಉತ್ತಮ} PS ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು,
ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ. |
14. ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು
ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು. |
15. ಆಗ ನಾನು ನನ್ನ ಹೃದಯದಲ್ಲಿ,
“ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು. |
16. ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು.
ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು. PS |
17. {ಕಠಿಣ ಶ್ರಮವು ವ್ಯರ್ಥ} PS ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.
|
19. ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.
|
21. ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ. PEPS
|
23. ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ. PEPS
|
24. ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.
|
26. ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ. PE
|