2. ಔತಣದ ಮನೆಗಿಂತ
ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು. |
10. ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ.
ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ. |
11. ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ.
ಇದು ಲೋಕದಲ್ಲಿ ಜೀವಿಸುವವರಿಗೆ * ಲೋಕದಲ್ಲಿ ಜೀವಿಸುವವರಿಗೆ ಅಥವಾ ಸೂರ್ಯನನ್ನು ನೋಡುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ. |
14. ಸುಖದ ದಿನದಲ್ಲಿ ಸುಖದಿಂದಿರು,
ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ. PEPS |
15. ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು.
ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ. |
16. ನೀನು ಅತಿಯಾಗಿ ನೀತಿವಂತನಾಗಿರಬೇಡ,
ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ? |
18. ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ.
ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು. |
23. ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು.
“ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು. |
25. ನಾನು ತಿರುಗಿಕೊಂಡು,
ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು. |
26. ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ.
ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು. PEPS |
27. ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.
|
28. ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ. PEPS
|
29. ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ. PE
|