1. {#1ಪೀಠಿಕೆ } [PS] [* 1 ಕೊರಿ 1:1 ನೋಡಿರಿ ]ದೇವರ ಚಿತ್ತಾನುಸಾರವಾಗಿ [† ಕೊರಿ 1:1 ನೋಡಿರಿ ]ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು [‡ ಕೆಲವು ಪ್ರತಿಗಳಲ್ಲಿ ಎಫೆಸದಲ್ಲಿರುವ ಎಂಬ ಪದ ಇಲ್ಲ; ಕೊಲೊ 4:16 ನೋಡಿರಿ. ]ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ [§ ಕೊಲೊ 1:2: ]ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,
2. [* ರೋಮಾ. 1:7 ನೋಡಿರಿ. ]ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ. [PE]
3. {#1ಕ್ರಿಸ್ತನಲ್ಲಿರುವ ಆತ್ಮೀಕ ಆಶೀರ್ವಾದಗಳು } [PS]ನಮ್ಮ ಕರ್ತನಾದ ಯೇಸುಕ್ರಿಸ್ತನ [† ರೋಮಾ. 15:6 ನೋಡಿರಿ. ]ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು [‡ ಎಫೆ 1:20; 2:6; 3:10: ]ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
4. ನಾವು ಆತನ ಸನ್ನಿಧಿಯಲ್ಲಿ [§ ಎಫೆ 5:27; ಕೊಲೊ 1:22; 1 ಥೆಸ. 4:7: ]ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು [* ಎಫೆ 2:10; 2 ಥೆಸ. 2:13; 1 ಪೇತ್ರ 1:2: ]ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.
5. [† ಎಫೆ 1:12,14 ]ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ [‡ ರೋಮಾ. 8 15: ] ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ [§ ಎಫೆ 1:9,11; ರೋಮಾ. 8:29,30. ]ಮೊದಲೇ ಸಂಕಲ್ಪಮಾಡಿದ್ದನು.
6. ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
7. ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ [* ಅ. ಕೃ. 20:28: ]ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ [† ಕೊಲೊ 1:14; ಅ. ಕೃ. 2:38: ]ಪಾಪ ಕ್ಷಮಾಪಣೆಯೆಂಬ [‡ ರೋಮಾ. 3:24; 1 ಕೊರಿ 1:30. ]ವಿಮೋಚನೆಯು ಉಂಟಾಯಿತು.
8. ಈ ಕೃಪೆಯನ್ನು ಆತನು [§ ರೋಮಾ. 16:25: ]ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.
9. ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.
10. ಕಾಲವು ಪರಿಪೂರ್ಣವಾದಾಗ, ಆತನು [* ಕೊಲೊ 1:16, 20: ]ಭೂಪರಲೋಕಗಳಲ್ಲಿರುವ ಸಮಸ್ತವನ್ನು [† ಕ್ರಿಸ್ತನ ಅಧಿಪತ್ಯಕ್ಕೆ ಅಥವಾ ಪ್ರಭುತ್ವಕ್ಕೆ ಅಧೀನಪಡಿಸಬೇಕೆಂದಿದ್ದನು. ]ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು. [PE]
11. [PS]ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು [‡ ಎಫೆ 1:5; 3:11; ರೋಮ. 8:28: ]ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.
12. ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು. [PE]
13. [PS]ನೀವು ಸಹ ನಿಮ್ಮ ರಕ್ಷಣಾ [§ ಕೊಲೊ 1:7: ]ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, [* ಅ. ಕೃ. 1:4: ]ವಾಗ್ದಾನಮಾಡಲ್ಪಟ್ಟ [† ಎಫೆ 4:30. ]ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.
14. [‡ 1 ಪೇತ್ರ. 2:9; ತೀತ. 2:14: ]ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ [§ ಕೆಲವು ಪ್ರತಿಗಳಲ್ಲಿ, ಪವಿತ್ರಾತ್ಮವರವು ನಮ್ಮ ಬಾಧ್ಯತೆಗೆ ಸಂಚಕಾರವಾಗಿದೆ ಎಂದು ಬರೆದಿದೆ. ]ಪವಿತ್ರಾತ್ಮನು [* ಅ. ಕೃ. 20:32; ಎಫೆ 1:18; 2 ಕೊರಿ 1:22; ಎಫೆ 4:30. ]ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ [† ಮುಂಚಿತವಾಗಿ ಕೊಟ್ಟ ಹಣ ಅಥವಾ ಕಳುಹಿಸಿದ ಸಹಾಯಕ, ಮುಂಚಿತವಾಗಿ ಗೊತ್ತುಮಾಡಿದ ವ್ಯವಸ್ಥೆ ಅಥವಾ ಜಮೀನುದಾರ. ]. [‡ ಎಫೆ 1:6, 12: ]ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ. [PE]
15. {#1ಕೃತಜ್ಞತೆಯೂ ಪ್ರಾರ್ಥನೆಯೂ } [PS]ಹೀಗಿರಲಾಗಿ [§ ಕೊಲೊ 1:4; ಫಿಲೆ. 5: ]ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,
16. [* ಕೊಲೊ 1:9: ]ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ.
17. [† ರೋಮಾ. 15:6: ]ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ [‡ ಕೊಲೊ 1:9, 10: ]ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
18. [§ ಅ. ಕೃ. 26:18: ]ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು [* ಎಫೆ 3:8,16, 17; 1:7; ಕೊಲೊ 1:27; ]ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,
19. ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.
20. ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, [† ಎಫೆ 4:10; ಕೊರಿ 15:24; ಯೋಹಾ 3:31: ]ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ
21. ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ [‡ ಫಿಲಿ. 2:9 ]ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.
22. ಇದಲ್ಲದೆ [§ ಕೀರ್ತ 8:6; 1 ಕೊರಿ 15:27 ]ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, [* ಎಫೆ 4:15; 5:23; ಕೊಲೊ 1:18; 2:10,19. ]ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.
23. [† ಎಫೆ 4:12,16; 5:30; ಕೊಲೊ 1:18. 1 ಕೊರಿ 12:27: ]ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ [‡ ಅಥವಾ, ಅದು ಆತನನ್ನು ಪರಿಪೂರ್ಣ ಮಾಡುತ್ತದೆ; ಮತ್ತು ಆತನ ದೊರೆತನವು ಅದರ ಎಲ್ಲಾ ಭಾಗಗಳಲ್ಲಿ ಪರಿಪೂರ್ಣವಾಗಿದೆ. ಎಫೆ 3:19; 4:10; ಕೊಲೊ 3:11: ]ಅದು ಸಂಪೂರ್ಣತೆಯುಳ್ಳದ್ದಾಗಿದೆ. [PE]