1. {#1ಅನ್ಯಜನರ ಬೋಧಕನಾದ ಪೌಲನು } [PS]ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ [* ಎಫೆ 3:13; ಕೊಲೊ 1:24: ]ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ [† ಎಫೆ 4:1; ಅ. ಕೃ. 23:18. ಫಿಲಿ. 1:7. 2 ತಿಮೊ. 1:8 ಇತ್ಯಾದಿ. ]ಸೆರೆಯಾಳಾಗಿದ್ದಾನೆ.
2. [‡ ಎಫೆ 1:10; ಕೊಲೊ 1:25: ]ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ [§ ವ. 7 ನೋಡಿರಿ. ]ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,
3. ಆತನು ಮರ್ಮವನ್ನು [* ಅ. ಕೃ. 22:17,21; 26:18. ಗಲಾ. 1:12; 2 ಕೊರಿ 12:1 ನೋಡಿರಿ. ]ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು [† ಎಫೆ 1:9, 10 ನೋಡಿರಿ. ]ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.
4. ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು [‡ 2 ಕೊರಿ 11:6 ನೋಡಿರಿ. ]ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು.
5. ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
6. ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ [§ ಗಲಾ. 3:29 ನೋಡಿರಿ. ಯೆಹೂದ್ಯರೊಂದಿಗೆ ]ದೇವಜನರೊಂದಿಗೆ ಸಹಬಾಧ್ಯರೂ [* ಎಫೆ 2:16: ]ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
7. ದೇವರು [† ಎಫೆ 3:20; 1:19 ನೋಡಿರಿ. ]ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ [‡ ಕೊಲೊ 1:23,25. 2 ಕೊರಿ 3:6 ನೋಡಿರಿ. ]ನಾನು ಈ ಸುವಾರ್ತೆಗೆ ಸೇವಕನಾದೆನು.
8. ಕ್ರಿಸ್ತನ [§ ಎಫೆ 1:18; ರೋಮಾ. 2:4; 11:33: ]ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು [* ಅ. ಕೃ. 9:15: ]ಅನ್ಯಜನರಿಗೆ ಸಾರುವ ಹಾಗೆಯೂ
9. ಹಾಗೂ [† ಎಫೆ 3:2,3: ]ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ [‡ ಕೊಲೊ 1:26: ]ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು [§ 1 ಕೊರಿ 15:9: ]ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.
10. (10-11) [* ಎಫೆ 1:11: ]ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ [† ಅಥವಾ ನಿತ್ಯವಾದ ಉದ್ದೇಶದ ಪ್ರಕಾರ. ]ನಿತ್ಯಸಂಕಲ್ಪದ ಮೇರೆಗೆ ತನ್ನ [‡ ರೋಮಾ. 11:33: ]ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ [§ ಎಫೆ 1:21. ಎಫೆ 6:12: ]ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.
11.
12. [* ಎಫೆ 2:18: ]ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ [† ಇಬ್ರಿ. 4:16; 10:19: ]ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
13. ಆದ್ದರಿಂದ [‡ ವ. 1 ನೋಡಿರಿ. ]ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. [§ 2 ಕೊರಿ 1:6: ]ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ. [PE]
14. {#1ಎಫೆಸದವರಿಗಾಗಿ ಪ್ರಾರ್ಥನೆ } [PS](14-15)ಹೀಗಿರಲಾಗಿ [* ಅಥವಾ, ಪ್ರತಿ ಜನವೂ ತನ್ನ ಮೂಲಜನಕನಿಂದ ಹೆಸರು ತೆಗೆದುಕೊಳ್ಳುತ್ತದಷ್ಟೆ; ಯಾವಾತನು ದೇವಜನರಾದ ನಮಗೆ ಮೂಲ ಜನಕನಾಗಿದ್ದಾನೋ. ]ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,
15.
16. ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ [† ಎಫೆ 6:10; ಫಿಲಿ. 4:13; ಕೊಲೊ 1:11: ]ವಿಶೇಷಬಲವನ್ನು ಹೊಂದುವಂತೆಯೂ,
17. [‡ ಎಫೆ 2:22: ]ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು [§ ವ. 8: ]ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.
18. [* ಅಥವಾ, ಆ ಸತ್ಯರ್ಥದ. ]ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,
19. ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, [† ಎಫೆ 1:23; ಕೊಲೊ 2:10: ]ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. [PE]
20. [PS] [‡ ವ. 7: ]ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ [§ 2 ಕೊರಿ 9:8: ]ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ
21. [* ರೋಮಾ. 11:36: ]ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್. [PE]