4. “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
|
5. ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
|
7. ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. PEPS
|
10. ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.
|
11. ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. PEPS
|
12. “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ. PEPS
|
17. “ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.” PS
|
18. {ಜನರು ಭಯಪಟ್ಟಿದ್ದು} PS ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
|
19. ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.
|
20. ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.
|
22. {ಯಜ್ಞವೇದಿಯ ಬಗ್ಗೆ ನಿಯಮಗಳು} PS ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
|
24. ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
|
25. ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.
|
26. ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’ ” ಎಂದು ಆಜ್ಞಾಪಿಸಿದನು. PE
|