1. {ದಾಸತ್ವದ ಕುರಿತಾದ ನ್ಯಾಯವಿಧಿಗಳು} (ಧರ್ಮೋ 15:12-18) PS “ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ; PEPS
|
2. “ ‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.
|
3. ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.
|
4. ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.’ ” PEPS
|
5. ಆದರೆ ದಾಸನು, “ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ,
|
6. ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು. PEPS
|
7. ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.
|
8. ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ. PEPS
|
13. ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.
|
14. ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು. PEPS
|
16. ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು. PEPS
|
18. ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು, PEPS
|
19. ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
|
20. ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು. PEPS
|
21. ಆ ದಾಸನು ಆಗಲೇ ಸಾಯದೆ ಒಂದೆರಡು ದಿನ ಬದುಕಿದ್ದರೆ, ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು. ಏಕೆಂದರೆ ಆ ದಾಸನು ಅವನ ಸೊತ್ತಾಗಿದ್ದಾನೆ. PEPS
|
22. ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.
|
26. ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.
|
28. {ಅಸ್ತಿಪಾಸ್ತಿಗಳ ಕುರಿತಾದ ನ್ಯಾಯವಿಧಿಗಳು} PS ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
|
29. ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು. PEPS
|
32. ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ * 342 ಗ್ರಾಂ ಬೆಳ್ಳಿ. ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. PEPS
|
33. ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,
|
34. ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು. PEPS
|
35. ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು.
|
36. ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು. PE
|