ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ವಿಮೋಚನಕಾಂಡ
1. {ಒಡಂಬಡಿಕೆಯ ರಕ್ತ} [PS] ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.
2. ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು” ಎಂದು ಹೇಳಿದನು. [PE][PS]
3. ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.
4. ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.
5. ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.
6. ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.
7. ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.
8. ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು. [PS]
9. {ಬೆಟ್ಟದಲ್ಲಿ ದೇವರೊಂದಿಗೆ} [PS] ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.
10. ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.
11. ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು. [PS]
12. {ಮೋಶೆ ಸೀನಾಯ್ ಬೆಟ್ಟವನ್ನು ಹತ್ತಿದ್ದು} [PS] ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
13. ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.
14. ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು. [PE][PS]
15. ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು.
16. ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.
17. ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.
18. ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು. [PE]

ಟಿಪ್ಪಣಿಗಳು

No Verse Added

ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 24 / 40
ವಿಮೋಚನಕಾಂಡ 24:8
ಒಡಂಬಡಿಕೆಯ ರಕ್ತ 1 ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು. 2 ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು” ಎಂದು ಹೇಳಿದನು. 3 ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು. 4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು. 5 ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು. 6 ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು. 7 ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು. 8 ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು. ಬೆಟ್ಟದಲ್ಲಿ ದೇವರೊಂದಿಗೆ 9 ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು. 10 ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು. 11 ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು. ಮೋಶೆ ಸೀನಾಯ್ ಬೆಟ್ಟವನ್ನು ಹತ್ತಿದ್ದು 12 ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. 13 ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು. 14 ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು. 15 ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು. 16 ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು. 17 ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು. 18 ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.
ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 24 / 40
Common Bible Languages
West Indian Languages
×

Alert

×

kannada Letters Keypad References