1. {ಯಾಜಕರ ದೀಕ್ಷಾವಸ್ತ್ರಗಳು} (ವಿಮೋ 39:1-7) PS ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.
|
2. ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.
|
3. ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.
|
4. ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ * ಎದೆಯ ಪದಕದ ಚೀಲ ಎದೆಯ ಕವಚ. , ಏಫೋದ್, † ಏಫೋದ್, ಮಹಾಯಾಜಕನ ಕವಚ ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.
|
5. ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರವನ್ನು, ಹಾಗೂ ನಾರಿನ ಬಟ್ಟೆಯನ್ನು ಆ ಕೆಲಸಕ್ಕಾಗಿ ಉಪಯೋಗಿಸಬೇಕು. PS
|
6. {ಏಫೋದ್} PS ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.
|
8. ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.
|
9. ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.
|
10. ಒಂದು ರತ್ನದಲ್ಲಿ ಆರು ಹೆಸರುಗಳನ್ನೂ ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನ ಕ್ರಮದ ಪ್ರಕಾರ ಕೆತ್ತಿಸಬೇಕು.
|
11. ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು.
|
12. ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.
|
14. ಮತ್ತು ಹೆಣಿಗೆ ಕೆಲಸದಿಂದ ಹುರಿಗಳಂತಿರುವ ಎರಡು ಚೊಕ್ಕ ಬಂಗಾರದ ಸರಪಣಿಗಳನ್ನು ಮಾಡಿಸಿ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು. PS
|
15. {ಎದೆಯ ಪದಕದ ಕವಚ} (ವಿಮೋ 39:8-21) PS ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಬೇಕು.
|
17. ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಹೆಚ್ಚಿಸಿರಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು ಇರಬೇಕು.
|
21. ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು. PEPS
|
25. ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಕೊಂಡಿಗಳಲ್ಲಿ ಸಿಕ್ಕಿಸಿ ಮುಂಭಾಗದಲ್ಲಿರಿಸಬೇಕು.
|
26. ಅದಲ್ಲದೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೆ ಇಡಿಸಬೇಕು.
|
27. ಮತ್ತು ಬೇರೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಏಫೋದ್ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿ ಹಾಕಿಸಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.
|
28. ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.
|
29. ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು.
|
30. ದೈವನಿರ್ಣಯವನ್ನು ತಿಳಿಸುವ ‡ ಅಥವಾ ದೈವನಿರ್ಣಯವನ್ನು ತಿಳಿದುಕೊಳ್ಳಲು ಯಾಜಕರಿಗೆ ಉಪಯುಕ್ತವಾಗಿರುವ ವಸ್ತು. ಊರೀಮ್ ತುಮ್ಮೀಮ್ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು. PS
|
31. {ಯಾಜಕರ ಇತರ ವಸ್ತ್ರಗಳು} (ವಿಮೋ 39:22-31) PS ಮಹಾಯಾಜಕನು ಏಫೋದ್ ಕವಚದ ಸಂಗಡ ಧರಿಸಿಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು.
|
32. ತಲೆತೂರಿಸುವುದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಆ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಅದರೊಂದಿಗೆ ಒಂದು ಪಟ್ಟಿಯನ್ನು ಹಾಕಿಸಬೇಕು.
|
33. ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣುಗಳನ್ನು ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಹಾಕಿಸಬೇಕು.
|
35. ಆರೋನನು ಯಾಜಕ ಸೇವೆ ಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದಂತಿರಲು ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು. PEPS
|
36. ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.
|
37. ಅದನ್ನು ಮುಂಡಾಸಕ್ಕೆ ಬಿಗಿಯುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು.
|
38. ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು. PEPS
|
39. ಆರೋನನು ಧರಿಸಬೇಕಾದ ಒಳ ಅಂಗಿಯನ್ನು ಹತ್ತಿಯ ನೂಲಿನಿಂದ ಕಸೂತಿ ಹಾಕಿಸಿ ನೇಯಿಸಬೇಕು. ಅವನ ಮುಂಡಾಸವನ್ನು ಹತ್ತಿಯ ನೂಲಿನಿಂದ ಮಾಡಿಸಬೇಕು. ಅವನ ನಡುಕಟ್ಟನ್ನು ಕಸೂತಿ ಕೆಲಸದಿಂದ ಮಾಡಿಸಬೇಕು.
|
40. ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು. PEPS
|
41. ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು. PEPS
|
42. ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.
|
43. ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ. PE
|