1. {#1ಮೋಶೆಯು ಹೊಸ ಕಲ್ಲಿನ ಹಲಗೆಗಳನ್ನು ಮಾಡಿದ್ದು. [BR]ಧರ್ಮೋ 10:1-5 } [PS]ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
2. ಬೆಳಿಗ್ಗೆ ನೀನು ಸಿದ್ಧನಾಗಿ, ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.
3. ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು” ಎಂದು ಹೇಳಿದನು.
4. ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.
5. ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು. [PE]
6. [PS]ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;
7. ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ. [PE]
8. [PS]ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ,
9. “ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು [* ಕಠಿಣ ಹೃದಯವುಳ್ಳವರು. ]ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು. [PE]
10. {#1ಒಡಂಬಡಿಕೆಯ ನವೀಕರಣ [BR]ವಿಮೋ 23:14-19; ಧರ್ಮೋ 7:1-5; 16:1-17 } [PS]ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.
11. ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.
12. ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.
13. ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.
14. ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.
15. ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,
16. ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.
17. ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು. [PE]
18.
19. [PS]“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ? [PE][PS]“ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.
20. ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು. [PE]
21.
22. [PS]“ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು. [PE][PS]“ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.
23. ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.
24. ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ. [PE]
25. [PS]“ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು.
26. ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.” [PE]
27. [PS]ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.
28. ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು. [PE]
29. {#1ಪ್ರಕಾಶಮಾನವಾದ ಮೋಶೆಯ ಮುಖ } [PS]ಮೋಶೆಯು ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಅ ಪ್ರಭಾವವು ಅವನಿಗೆ ತಿಳಿದಿರಲಿಲ್ಲ.
30. ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು.
31. ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು.
32. ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಿಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.
33. ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸಿದ ನಂತರ ತನ್ನ ಮುಖದ ಮೇಲೆ ಮುಸುಕುಹಾಕಿಕೊಂಡನು.
34. ಮೋಶೆಯು ಯೆಹೋವನ ಸಂಗಡ ಮಾತನಾಡಬೇಕೆಂದು ಆತನ ಸನ್ನಿಧಿಗೆ ಹೋಗುವಾಗಲೆಲ್ಲಾ ಈ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಹೊರಗೆ ಬಂದಾಗ ಆ ಮುಸುಕನ್ನು ತೆಗೆದಿಡುತ್ತಿದ್ದನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸುತ್ತಿದ್ದನು.
35. ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು. [PE]