1. {ಯಾಜಕರಿಗೆ ದೀಕ್ಷಾವಸ್ತ್ರಗಳನ್ನು ಮಾಡಿದ್ದು} (ವಿಮೋ 28:1-14) PS ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು. PEPS
|
2. ಮಹಾಯಾಜಕನ ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಮಾಡಿದರು.
|
3. ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದೊಡನೆಯೂ ಹತ್ತಿಯ ಬಟ್ಟೆಯೊಡನೆಯೂ ಕಸೂತಿ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸವನ್ನು ಮಾಡುವುದಕ್ಕಾಗಿ ಬಂಗಾರವನ್ನು ಬಡಿದು ಹಗುರವಾದ ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು.
|
5. ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. PEPS
|
6. ಮುದ್ರಾಕ್ಷವನ್ನು ಕೆತ್ತುವ ರೀತಿಯಲ್ಲಿ ಗೋಮೇಧಕರತ್ನಗಳಲ್ಲಿ ಇಸ್ರಾಯೇಲನ ಹನ್ನೆರಡು ಮಕ್ಕಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಹಚ್ಚಿದರು.
|
7. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ರತ್ನಗಳನ್ನು ಇಸ್ರಾಯೇಲರ ಜ್ಞಾಪಕಾರ್ಥವಾಗಿ ಅವುಗಳನ್ನು ಏಫೋದ್ ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು. PS
|
8. {ಏಫೋದ್ ಕವಚವನ್ನು ಮಾಡಿದ್ದು} (ವಿಮೋ 38:1-7) PS ಏಫೋದ್ ಕವಚದಂತೆಯೇ ಕಸೂತಿಯಿಂದಲೂ ಕೆಲಸದಿಂದ ಚಿನ್ನದ ದಾರಗಳಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ನಯವಾದ ನಾರಿನ ಬಟ್ಟೆಯಲ್ಲಿ ಎದೆಯಪದಕವನ್ನು ಮಾಡಿದನು.
|
9. ಅದು ಚಚ್ಚೌಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು.
|
10. ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಇರಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು.
|
14. ಇಸ್ರಾಯೇಲರ ಕುಲಗಳ ಸಂಖ್ಯೆಯ ಪ್ರಕಾರ ಹನ್ನೆರಡು ರತ್ನಗಳಿದ್ದವು; ಮುದ್ರಾಕ್ಷಗಳಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರು ಕೆತ್ತಲ್ಪಟ್ಟಿತ್ತು.
|
16. ಎರಡು ಚಿನ್ನದ ಬಳೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಎದೆಪದಕದ ಎರಡು ಮೂಲೆಗಳಿಗೆ ಜೋಡಿಸಿದರು.
|
18. ಹೆಣಿಗೇಕೆಲಸದ ಆ ಸರಪಣಿಗಳ ಅಂಚುಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಬಳೆಗಳ ಮುಂಭಾಗಕ್ಕೆ ಜೋಡಿಸಿದರು.
|
20. ಅವರು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಏಫೋದ್ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.
|
21. ಎದೆಯಪದಕವು ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದರು. PS
|
22. {ಯಾಜಕರ ಇತರ ವಸ್ತ್ರಗಳ ತಯಾರಿಕೆ} (ವಿಮೋ 28:31-43) PS ಬೆಚಲೇಲನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇಕಾರನ ಕೆಲಸದಿಂದ ಮಾಡಿದನು.
|
23. ತಲೆತೂರಿಸುವುದಕ್ಕೆ ಅದರಲ್ಲಿ ಕೊರಳು ಪಟ್ಟಿಯನ್ನು ಮಾಡಿ ಅದು ಹರಿಯದಂತೆ ಅದರ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿದನು.
|
24. ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.
|
26. ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು. PEPS
|
29. ಮತ್ತು ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. PEPS
|
30. ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ, ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.
|
31. ಅದನ್ನು ಮುಂಡಾಸಕ್ಕೆ ಜೋಡಿಸುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. PS
|
32. {ಕೆಲಸದ ಮುಕ್ತಾಯ} (ವಿಮೋ 35:10-19) PS ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು. PEPS
|
33. ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು,
|
34. ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು,
|
37. ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು,
|
40. ತೊಟ್ಟಿಯನ್ನು, ಅದರ ಪೀಠವನ್ನು, ಅಂಗಳದ ತೆರೆಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಯನ್ನು, ಅದರ ಹಗ್ಗಗಳನ್ನು, ಗೂಟಗಳನ್ನು, ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನು,
|
41. ದೇವಮಂದಿರದೊಳಗೆ ನಡೆಯುವ ದೇವರಕಾರ್ಯಗಳಿಗೆ ಅಲಂಕಾರ ವಸ್ತ್ರ ಅಂದರೆ ಆರೋನನಿಗೆ ಬೇಕಾದ ಪವಿತ್ರ ವಸ್ತ್ರಗಳನ್ನು ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳನ್ನು ತಂದರು. PEPS
|
43. ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು. PE
|