1. {ಯೆಹೋವನು ಇಸ್ರಾಯೇಲರನ್ನು ಬಿಡುಗಡೆಗೊಳಿಸುವುದಾಗಿ ವಾಗ್ದಾನವನ್ನು ಮಾಡಿದ್ದು} PS ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು. PEPS
|
3. ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ * ಎಲ್ ಷಡಾಯ್. ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.
|
4. ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.
|
5. ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.
|
6. ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.
|
7. ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.
|
8. ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.
|
9. ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.
|
11. “ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು” ಅಂದನು.
|
12. ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ † ಇಬ್ರಿಯ ಭಾಷೆಯಲ್ಲಿ ಸುನ್ನತಿಯಿಲ್ಲದ ತುಟಿಗಳುಳ್ಳ ಮನುಷ್ಯನು. ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.
|
13. ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು. PS
|
14. {ಮೋಶೆ ಮತ್ತು ಆರೋನರ ವಂಶಾವಳಿ} PS ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.
|
15. ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು.
|
16. ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.
|
20. ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು.
|
23. ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
|
25. ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.
|
26. ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.
|
27. ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ. PS
|
29. ಆತನು ಮೋಶೆಗೆ, “ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು” ಎಂದನು.
|
30. ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು. PE
|