ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆಹೆಜ್ಕೇಲನು
1. {#1ಯೆಹೆಜ್ಕೇಲನ ಕರೆ } [PS]ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು.
2. ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.
3. ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ. [PE]
4. [PS]“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.
5. ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.” [PE]
6. [PS]“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.
7. ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.” [PE]
8. {#1ಪ್ರವಾದಿಗೆ ಲಭಿಸಿದ ವರ }
9. [PS]ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು. [PE][PS]ಇಗೋ, ನಾನು ನೋಡುತ್ತಿರಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರುಳಿಯು ಕಾಣಿಸಿತು.
10. ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ. [PE]
ಒಟ್ಟು 48 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 48
ಯೆಹೆಜ್ಕೇಲನ ಕರೆ 1 ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು. 2 ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು. 3 ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ. 4 “ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ. 5 ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.” 6 “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು. 7 ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.” ಪ್ರವಾದಿಗೆ ಲಭಿಸಿದ ವರ 8 9 ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು. ಇಗೋ, ನಾನು ನೋಡುತ್ತಿರಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರುಳಿಯು ಕಾಣಿಸಿತು. 10 ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.
ಒಟ್ಟು 48 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 48
×

Alert

×

Kannada Letters Keypad References