2. “ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,
|
3. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!
|
4. ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.
|
7. ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.
|
9. ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ.
|
11. ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.
|
12. ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ. PEPS
|
14. ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.
|
15. ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.
|
16. ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.’ ” PS
|
18. “ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.
|
19. ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಯೆರೂಸಲೇಮಿನೊಳಕ್ಕೆ ಸೇರಿಸುವೆನು.
|
20. ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ,, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು.
|
22. ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.’ ” PS
|
25. ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
|
26. ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.
|
27. ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.
|
28. ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.
|
29. ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ. PEPS
|
30. “ ‘ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.
|
31. ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.” PE
|