ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಹೆಜ್ಕೇಲನು
1. {ತೂರಿನ ವಿರುದ್ಧವಾದ ದೈವೋಕ್ತಿ} [PS] ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2. “ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.
3. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.
4. ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು.
5. ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’
6. ಬಯಲು ಭೂಮಿಯಲ್ಲಿನ ಅದರ ಕುಮಾರ್ತೆಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು. [PE][PS]
7. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.
8. ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು.
9. ಗುರಾಣಿ ಹಿಡಿದಿರುವವರನ್ನು ಕಳುಹಿಸಿ, ತನ್ನ ಯುದ್ಧ ಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೋಟೆ ಕೊತ್ತಲಗಳನ್ನು ಒಡೆದು ಬಿಡುವನು.
10. ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.
11. ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲು ಕಂಬಗಳನ್ನು ಕೆಡವಿ ಹಾಕುವನು.
12. ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.
13. ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.
14. ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ. [PE][PS]
15. ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?
16. ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.
17. ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!
18. ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.” [PE][PS]
19. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು. [PE][PS]
20. “ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.
21. ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ. [PE]

Notes

No Verse Added

Total 48 Chapters, Current Chapter 26 of Total Chapters 48
ಯೆಹೆಜ್ಕೇಲನು 26:1
1. {ತೂರಿನ ವಿರುದ್ಧವಾದ ದೈವೋಕ್ತಿ} PS ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ವಾಕ್ಯವನ್ನು ನನಗೆ ದಯಪಾಲಿಸಿದನು,
2. “ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.
3. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.
4. ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು.
5. ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’
6. ಬಯಲು ಭೂಮಿಯಲ್ಲಿನ ಅದರ ಕುಮಾರ್ತೆಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು. PEPS
7. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.
8. ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು.
9. ಗುರಾಣಿ ಹಿಡಿದಿರುವವರನ್ನು ಕಳುಹಿಸಿ, ತನ್ನ ಯುದ್ಧ ಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೋಟೆ ಕೊತ್ತಲಗಳನ್ನು ಒಡೆದು ಬಿಡುವನು.
10. ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.
11. ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲು ಕಂಬಗಳನ್ನು ಕೆಡವಿ ಹಾಕುವನು.
12. ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.
13. ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.
14. ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ. PEPS
15. ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?
16. ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.
17. ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!
18. ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.” PEPS
19. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು. PEPS
20. “ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.
21. ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ. PE
Total 48 Chapters, Current Chapter 26 of Total Chapters 48
×

Alert

×

kannada Letters Keypad References