2. “ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.
|
4. ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.
|
5. ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.
|
6. ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’ PEPS
|
7. “ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.
|
8. ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.
|
9. ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ. PS
|
10. {ಕಾವಲುಗಾರನ ಸಂದೇಶ} PS “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.
|
11. ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’ ” ಇದು ಕರ್ತನಾದ ಯೆಹೋವನ ನುಡಿ.
|
12. ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.
|
13. ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.
|
14. ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,
|
15. ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.
|
16. ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.
|
20. ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.” PS
|
21. {ಯೆರೂಸಲೇಮಿನ ಪತನದ ವಿವರಣೆ} PS ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.
|
22. ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.
|
24. “ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’ ” ಎಂದು ಅಂದುಕೊಳ್ಳುತ್ತಿದ್ದಾರೆ.
|
25. ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?
|
26. ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?”
|
27. ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.
|
28. ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.
|
29. ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು. PS
|
30. {ಪ್ರವಾದಿಯ ಸಂದೇಶದ ಪರಿಣಾಮ} PS ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
|
31. ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
|
32. ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
|