1. {ಸಬ್ಬತ್ತಿನ ಮತ್ತು ಹಬ್ಬದ ಆಚರಣೆ} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.
|
2. ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.
|
3. ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲಿನ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ.
|
5. ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.
|
6. ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು.
|
7. ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು. ದೇವಾಲಯದ ಆಗಮನ ನಿರ್ಗಮನದ ಕ್ರಮ, ವಿವಿಧ ನಿಯಮಗಳು PEPS
|
9. ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು.
|
11. ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
|
12. ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು. PS
|
13. {ನಿತ್ಯಸರ್ವಾಂಗಹೋಮ} PS “ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.
|
14. ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.
|
15. ಯಾಜಕರು ಕುರಿಯನ್ನೂ, ಧಾನ್ಯನೈವೇದ್ಯವನ್ನೂ, ಎಣ್ಣೆಯನ್ನೂ ನಿತ್ಯ ಸರ್ವಾಂಗಹೋಮವಾಗಿ ಪ್ರತಿ ದಿನ ಬೆಳಗ್ಗೆ ಸಮರ್ಪಿಸಬೇಕು.” PS
|
16. {ಅರಸನ ಸ್ವತ್ತು ಪರಾಧೀನವಾಗಬಾರದು} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಅರಸನು ತನ್ನ ಮಕ್ಕಳಲ್ಲಿ ಒಬ್ಬನಿಗೆ ದಾನ ಕೊಟ್ಟರೆ, ಅದು ತಂದೆಯ ಸ್ವಾಸ್ತ್ಯವಾದ ಕಾರಣ, ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ.
|
17. ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ * ಬಿಡುಗಡೆಯ ವರ್ಷದವರೆಗೆ ಇದು ಜೂಬಿಲಿ ವರ್ಷವಾಗಿದ್ದು ಏಳನೆಯ ವರ್ಷವಾಗಿದ್ದು ಕ್ಷಮಾಪಣೆ ಮತ್ತು ಪುನಃ ಸ್ಥಾಪನೆಯ ವರ್ಷವಾಗಿದೆ. ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು.
|
18. ಇದಲ್ಲದೆ ಅರಸನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು. PS
|
19. {ದೇವಾಲಯದ ಪಾಕಶಾಲೆಗಳು} PS “ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.”
|
20. ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು. PEPS
|
21. ತರುವಾಯ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಬರಮಾಡಿ, ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡು ಹೋದನು. ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.
|
22. ಹೌದು, ಅಂಗಳದ ನಾಲ್ಕು ಮೂಲೆಗಳಲ್ಲಿಯೂ ನಲ್ವತ್ತು ಮೊಳ ಉದ್ದದ, ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.
|
23. ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತು ಮುತ್ತಲು ಕಲ್ಲಿನ ಸಾಲುಗಳು ಚಾಚಿಕೊಂಡಿತು. ಆ ಸಾಲುಗಳ ಕೆಳಗೆ ಒಲೆಗಳು ಸುತ್ತಲೂ ಇದ್ದವು.
|
24. ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು. PE
|