ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆಹೆಜ್ಕೇಲನು
1. {#1ಇಸ್ರಾಯೇಲರ ನಾಶನ ಸಮೀಪಿಸಿತು } [PS]ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
2. “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, [PE][QS]‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’ [QE]
3. [QS]ಈಗಲೇ ನಿನಗೆ ಅಂತ್ಯವು ಬಂದಿದೆ; [QE][QS]ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು. [QE]
4. [QS]ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; [QE][QS]ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.” [QE]
5. [PS]ಕರ್ತನಾದ ಯೆಹೋವನು ಇಂತೆನ್ನುತ್ತಾನೆ, [PE][QS]“ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು! [QE]
6. [QS]ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು! [QE]
7. [QS]ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. [QE][QS]ಸಮಯ ಬಂದಿತು, ದಿನ ಸಮೀಪಿಸಿತು; [QE][QS]ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ. [QE]
8. [QS]ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, [QE][QS]ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು. [QE]
9. [QS]ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, [QE][QS]ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು. [QE]
10. [PS]“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, [PE][QS]ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ. [QE]
11. [QS]ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, [QE][QS]ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ. [QE]
12. [QS]ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, [QE][QS]ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. [QE]
13. [QS]ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; [QE][QS]ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. [QE][QS]ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ. [QE]
14. [QS]ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; [QE][QS]ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. [QE]
15. [QS]ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; [QE][QS]ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು. [QE]
16. [QS]ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, [QE][QS]ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು. [QE]
17. [QS]ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು. [QE]
18. [QS]ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; [QE][QS]ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು. [QE]
19. [QS]ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; [QE][QS]ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, [QE][QS]ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ. [QE]
20. [QS]ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; [QE][QS]ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; [QE][QS]ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು. [QE]
21. [QS]ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; [QE][QS]ಅವರು ಅದನ್ನು ಹೊಲೆಗೊಳಿಸುವೆನು. [QE]
22. [QS]ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; [QE][QS]ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು. [QE]
23. [QS]ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, [QE][QS]ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ. [QE]
24. [QS]ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; [QE][QS]ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು. [QE]
25. [QS]ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ. [QE]
26. [QS]ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; [QE][QS]‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; [QE][QS]ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು. [QE]
27. [QS]ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, [QE][QS]ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, [QE][QS]ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.” [QE]
ಒಟ್ಟು 48 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 48
ಇಸ್ರಾಯೇಲರ ನಾಶನ ಸಮೀಪಿಸಿತು 1 ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’ 3 ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು. 4 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.” 5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು! 6 ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು! 7 ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ. 8 ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು. 9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು. 10 “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ. 11 ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ. 12 ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. 13 ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ. 14 ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. 15 ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು. 16 ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು. 17 ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು. 18 ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು. 19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ. 20 ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು. 21 ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವೆನು. 22 ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು. 23 ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ. 24 ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು. 25 ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ. 26 ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು. 27 ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
ಒಟ್ಟು 48 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 48
×

Alert

×

Kannada Letters Keypad References