1. {ಸೆರೆಯಿಂದ ಹಿಂತಿರುಗಿ ಬಂದವರ ಪಟ್ಟಿ} PS ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.
|
2. ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:
|
42. ದ್ವಾರಪಾಲಕರ ಸಂತಾನದವರು: ಶಲ್ಲೂಮ್ ಸಂತಾನದವರು, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139. PEPS
|
59. ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು.
|
61. ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)
|
62. ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತಿರಸ್ಕರಿಸಲ್ಪಟ್ಟರು.
|
63. ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು. PEPS
|
65. ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಜನರು. ಅವರಲ್ಲಿ ಗಾಯಕರೂ, ಗಾಯಕಿಯರೂ ಇನ್ನೂರು ಜನರು ಇದ್ದರು.
|
68. ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.
|
69. ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, * ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಅಂದರೆ 500 ಕಿಲೋಗ್ರಾಂ. ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ † ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಆದರೆ 2,800 ಕಿಲೋಗ್ರಾಂ. ಮತ್ತು ನೂರು ಯಾಜಕವಸ್ತ್ರಗಳು. PEPS
|
70. ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು. PE
|