1. {ಎಜ್ರನು ಯೆರೂಸಲೇಮಿಗೆ ಬಂದದ್ದು} PS ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.
|
6. ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.
|
7. ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು.
|
9. ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.
|
10. ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು. PS
|
11. {ಅರ್ತಷಸ್ತನು ಎಜ್ರನಿಗೆ ಕೊಟ್ಟ ಪತ್ರ} PS ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ. PEPS
|
12. “ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,
|
13. ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.
|
14. ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು.
|
15. ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ,
|
16. ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.
|
17. ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
|
18. ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡಿರಿ.
|
19. ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.
|
20. ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು. PEPS
|
21. “ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.
|
22. ನೂರು ತಲಾಂತು ಬೆಳ್ಳಿ * ನೂರು ತಲಾಂತು ಬೆಳ್ಳಿ ಅಂದರೆ 3,400 ಕಿಲೋಗ್ರಾಂ ಬೆಳ್ಳಿ. , ನೂರು ಕೋರ್ ಗೋದಿ † ನೂರು ಕೋರ್ ಗೋದಿ ಅಂದರೆ 10,000 ಕಿಲೋಗ್ರಾಂ ಗೋದಿ. ನೂರು ಬತ್ ದ್ರಾಕ್ಷಾರಸ ‡ ನೂರು ಬತ್ ದ್ರಾಕ್ಷಾರಸ ಅಂದರೆ 2,000 ಲೀಟರ್. ದ್ರಾಕ್ಷಾರಸ , ಎಣ್ಣೆ ನೂರು ಬತ್ § ಎಣ್ಣೆ ನೂರು ಬತ್ ಅಂದರೆ 2,000 ಲೀಟರ್. ಎಣ್ಣೆ. ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.
|
23. ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.
|
24. ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’ PEPS
|
25. “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
|
26. ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ. PS
|
27. {ಎಜ್ರನು ಯೆಹೋವನನ್ನು ಸ್ತುತಿಸಿದ್ದು} PS ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ * ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಅಂದರೆ ಘನಪಡಿಸುವುದಕ್ಕೆ. ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.
|
28. ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು. PE
|