1. {#1ವಂದನೆಯೂ ದೇವರ ಸ್ತೋತ್ರವೂ } [PS] [* ಗಲಾ. 1:11,12 ]ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ [† ಅ. ಕೃ. 9:6; 20:24; 22:10,15,21; 26:16; 1 ತಿಮೊ. 1:1 ]ಯೇಸು ಕ್ರಿಸ್ತನ ಮುಖಾಂತರವೂ ಮತ್ತು [‡ ಅ. ಕೃ. 2:24 ]ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ
2. ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ [§ ಅ. ಕೃ. 14:21; 16:6; 1 ಕೊರಿ 16:1 ]ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,
3. [* 1 ತಿಮೊ. 1:2 ]ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ [† ರೋಮಾ. 1:7; ಕೊರಿ 1:3 ]ನಿಮಗೆ ಕೃಪೆಯೂ ಶಾಂತಿಯೂ ಆಗಲಿ. [PE]
4. [PS]ಆತನು ನಮ್ಮನ್ನು [‡ ಎಫೆ 2:2; 1 ಯೋಹಾ 5:19 ]ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, [§ ಮತ್ತಾ 20:28; ರೋಮಾ. 4:25; 1 ಕೊರಿ 15:3 ]ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.
5. ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್. [PE]
6. {#1ಏಕೈಕ ಸುವಾರ್ತೆ } [PS]ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ [* 2 ಕೊರಿ 11:4; 1 ತಿಮೊ. 1:3 ]ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.
7. [† ಅ. ಕೃ. 4:12; 1 ಕೊರಿ 3:11 ]ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು [‡ ಗಲಾ. 5:10 ]ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.
8. ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ [§ 2 ಕೊರಿ 11:14 ]ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು [* ರೋಮಾ. 9:3 ]ಶಾಪಗ್ರಸ್ತನಾಗಲಿ.
9. ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ [† ರೋಮಾ. 9:3 ]ಅವನು ಶಾಪಗ್ರಸ್ತನಾಗುವನು. [PE]
10.
1. [PS]ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? [‡ 1 ಥೆಸ. 2:4 ]ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ. [PE]{#1ಪೌಲನು ಅಪೊಸ್ತಲನಾದ್ದದು ಹೇಗೆ } [PS]ಸಹೋದರರೇ, [§ 1 ಕೊರಿ 15:1-3 ]ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.
12. [* ಗಲಾ. 1:1; 1 ಕೊರಿ 11:3; 15:3 ]ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ [† ಗಲಾ. 1:16; 1 ಕೊರಿ 2:10; 2 ಕೊರಿ 12:1 ]ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.
13. ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ [‡ ಅ. ಕೃ. 26:4 ]ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. [§ ಅ. ಕೃ. 8:3 ]ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
14. ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ [* ಫಿಲಿ. 3:6 ]ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು. [PE]
15. [PS]ಆದರೆ [† ಯೆಶಾ 49:1,; ಯೆರೆ 1:5 ]ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ [‡ ಅ. ಕೃ. 13:2; ಮಾರ್ಕ 6:3; ರೋಮಾ. 1:1 ]ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,
16. ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು [§ ಗಲಾ. 2:9; ಅ. ಕೃ. 9:15 ]ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
17. ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು. [PE]
18. [PS] [* ಅ. ಕೃ. 9:22-27; 22:17 ]ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.
19. ಆದರೆ [† ಮತ್ತಾ 12:46; ಮಾರ್ಕ 6:3; ಅ. ಕೃ. 12:17 ]ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
20. ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ. [PE]
21. [PS] [‡ ಅ. ಕೃ. 9:30; 11:25, 26; 13:1 ]ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.
22. ಆದರೆ ಕ್ರಿಸ್ತನಲ್ಲಿರುವ [§ 1 ಥೆಸ. 2:14 ]ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.
23. “ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,
24. ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು. [PE]