ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಗಲಾತ್ಯದವರಿಗೆ
1. {ವಂದನೆಯೂ ದೇವರ ಸ್ತೋತ್ರವೂ} [PS] [* ಗಲಾ. 1:11,12] ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ [† ಅ. ಕೃ. 9:6; 20:24; 22:10,15,21; 26:16; 1 ತಿಮೊ. 1:1] ಯೇಸು ಕ್ರಿಸ್ತನ ಮುಖಾಂತರವೂ ಮತ್ತು [‡ ಅ. ಕೃ. 2:24] ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ
2. ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ [§ ಅ. ಕೃ. 14:21; 16:6; 1 ಕೊರಿ 16:1] ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,
3. [* 1 ತಿಮೊ. 1:2] ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ [† ರೋಮಾ. 1:7; ಕೊರಿ 1:3] ನಿಮಗೆ ಕೃಪೆಯೂ ಶಾಂತಿಯೂ ಆಗಲಿ. [PE][PS]
4. ಆತನು ನಮ್ಮನ್ನು [‡ ಎಫೆ 2:2; 1 ಯೋಹಾ 5:19] ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, [§ ಮತ್ತಾ 20:28; ರೋಮಾ. 4:25; 1 ಕೊರಿ 15:3] ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.
5. ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್. [PS]
6. {ಏಕೈಕ ಸುವಾರ್ತೆ} [PS] ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ [* 2 ಕೊರಿ 11:4; 1 ತಿಮೊ. 1:3] ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.
7. [† ಅ. ಕೃ. 4:12; 1 ಕೊರಿ 3:11] ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು [‡ ಗಲಾ. 5:10] ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.
8. ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ [§ 2 ಕೊರಿ 11:14] ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು [* ರೋಮಾ. 9:3] ಶಾಪಗ್ರಸ್ತನಾಗಲಿ.
9. ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ [† ರೋಮಾ. 9:3 ] ಅವನು ಶಾಪಗ್ರಸ್ತನಾಗುವನು. [PE][PS]
10. ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? [‡ 1 ಥೆಸ. 2:4] ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ. [PS]
11. {ಪೌಲನು ಅಪೊಸ್ತಲನಾದ್ದದು ಹೇಗೆ} [PS] ಸಹೋದರರೇ, [§ 1 ಕೊರಿ 15:1-3] ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.
12. [* ಗಲಾ. 1:1; 1 ಕೊರಿ 11:3; 15:3] ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ [† ಗಲಾ. 1:16; 1 ಕೊರಿ 2:10; 2 ಕೊರಿ 12:1] ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.
13. ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ [‡ ಅ. ಕೃ. 26:4] ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. [§ ಅ. ಕೃ. 8:3] ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
14. ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ [* ಫಿಲಿ. 3:6] ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು. [PE][PS]
15. ಆದರೆ [† ಯೆಶಾ 49:1,; ಯೆರೆ 1:5] ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ [‡ ಅ. ಕೃ. 13:2; ಮಾರ್ಕ 6:3; ರೋಮಾ. 1:1] ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,
16. ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು [§ ಗಲಾ. 2:9; ಅ. ಕೃ. 9:15] ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
17. ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು. [PE][PS]
18. [* ಅ. ಕೃ. 9:22-27; 22:17] ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.
19. ಆದರೆ [† ಮತ್ತಾ 12:46; ಮಾರ್ಕ 6:3; ಅ. ಕೃ. 12:17] ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
20. ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ. [PE][PS]
21. [‡ ಅ. ಕೃ. 9:30; 11:25, 26; 13:1] ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.
22. ಆದರೆ ಕ್ರಿಸ್ತನಲ್ಲಿರುವ [§ 1 ಥೆಸ. 2:14] ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.
23. “ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,
24. ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು. [PE]

Notes

No Verse Added

Total 6 Chapters, Current Chapter 1 of Total Chapters 6
1 2 3 4 5 6
ಗಲಾತ್ಯದವರಿಗೆ 1:3
1. {ವಂದನೆಯೂ ದೇವರ ಸ್ತೋತ್ರವೂ} PS * ಗಲಾ. 1:11,12 ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಅ. ಕೃ. 9:6; 20:24; 22:10,15,21; 26:16; 1 ತಿಮೊ. 1:1 ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಅ. ಕೃ. 2:24 ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ
2. ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ § ಅ. ಕೃ. 14:21; 16:6; 1 ಕೊರಿ 16:1 ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,
3. * 1 ತಿಮೊ. 1:2 ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ರೋಮಾ. 1:7; ಕೊರಿ 1:3 ನಿಮಗೆ ಕೃಪೆಯೂ ಶಾಂತಿಯೂ ಆಗಲಿ. PEPS
4. ಆತನು ನಮ್ಮನ್ನು ಎಫೆ 2:2; 1 ಯೋಹಾ 5:19 ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, § ಮತ್ತಾ 20:28; ರೋಮಾ. 4:25; 1 ಕೊರಿ 15:3 ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.
5. ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್. PS
6. {ಏಕೈಕ ಸುವಾರ್ತೆ} PS ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ * 2 ಕೊರಿ 11:4; 1 ತಿಮೊ. 1:3 ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.
7. ಅ. ಕೃ. 4:12; 1 ಕೊರಿ 3:11 ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ಗಲಾ. 5:10 ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.
8. ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ § 2 ಕೊರಿ 11:14 ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು * ರೋಮಾ. 9:3 ಶಾಪಗ್ರಸ್ತನಾಗಲಿ.
9. ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ರೋಮಾ. 9:3 ಅವನು ಶಾಪಗ್ರಸ್ತನಾಗುವನು. PEPS
10. ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? 1 ಥೆಸ. 2:4 ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ. PS
11. {ಪೌಲನು ಅಪೊಸ್ತಲನಾದ್ದದು ಹೇಗೆ} PS ಸಹೋದರರೇ, § 1 ಕೊರಿ 15:1-3 ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.
12. * ಗಲಾ. 1:1; 1 ಕೊರಿ 11:3; 15:3 ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಗಲಾ. 1:16; 1 ಕೊರಿ 2:10; 2 ಕೊರಿ 12:1 ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.
13. ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ಅ. ಕೃ. 26:4 ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. § ಅ. ಕೃ. 8:3 ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
14. ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ * ಫಿಲಿ. 3:6 ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು. PEPS
15. ಆದರೆ ಯೆಶಾ 49:1,; ಯೆರೆ 1:5 ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ಅ. ಕೃ. 13:2; ಮಾರ್ಕ 6:3; ರೋಮಾ. 1:1 ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,
16. ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು § ಗಲಾ. 2:9; ಅ. ಕೃ. 9:15 ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
17. ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು. PEPS
18. * ಅ. ಕೃ. 9:22-27; 22:17 ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.
19. ಆದರೆ ಮತ್ತಾ 12:46; ಮಾರ್ಕ 6:3; ಅ. ಕೃ. 12:17 ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
20. ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ. PEPS
21. ಅ. ಕೃ. 9:30; 11:25, 26; 13:1 ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.
22. ಆದರೆ ಕ್ರಿಸ್ತನಲ್ಲಿರುವ § 1 ಥೆಸ. 2:14 ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.
23. “ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,
24. ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು. PE
Total 6 Chapters, Current Chapter 1 of Total Chapters 6
1 2 3 4 5 6
×

Alert

×

kannada Letters Keypad References