1. {#1ಕ್ರೈಸ್ತ ಸ್ವಾತಂತ್ರ್ಯ }
2. [PS]ಕ್ರಿಸ್ತನು ನಮ್ಮನ್ನು [* ಗಲಾ. 2:4; 5:13 ]ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, [† ಅ. ಕೃ. 15:10 ]ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ. [PE][PS]ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ, [‡ ಅ. ಕೃ. 15:1; 1 ಕೊರಿ 7:18; ಗಲಾ. 5:3-11 ]ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.
3. [§ ರೋಮಾ. 2:25 ]ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.
4. [* ಗಲಾ. 2:21; 3:10; ರೋಮಾ. 9:31,32 ]ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.
5. ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ [† ರೋಮಾ. 8:23,25 ]ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.
6. ಕ್ರಿಸ್ತ ಯೇಸುವಿನಲ್ಲಿರುವವರಿಗೆ [‡ ಗಲಾ. 6:15; 1 ಕೊರಿ 7:19; ಕೊಲೊ 3:11; ಗಲಾ. 3:28 ]ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ [§ ಎಫೆ 6:23; 1 ಥೆಸ. 1:3; ಯಾಕೋಬ 2:18,20,22 ]ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.
7. ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು?
8. ಈ ಮನವೊಲಿಕೆಯು ನಿಮ್ಮನ್ನು ಕರೆದಾತನಿಂದ ಹುಟ್ಟಿದ್ದಲ್ಲ.
9. [* 1 ಕೊರಿ 5:6 ]ಸ್ವಲ್ಪ ಹುಳಿಯಿಂದ ಕಣಕವೆಲ್ಲಾ ಹುಳಿಯಾಗುವುದು.
10. ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತಾಗಿ ನನಗೆ ಭರವಸೆ ಉಂಟು. [† ಗಲಾ. 1:; 5:12 ]ನಿಮ್ಮಲ್ಲಿ ಬೇಧವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ, ಅವನು ದಂಡನೆಯನ್ನು ಅನುಭವಿಸುವನು. [PE]
11. [PS]ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ [‡ ಗಲಾ. 4:29; 6:12 ]ನನಗೆ ಹಿಂಸೆಯಾಗುವುದಾದರೂ ಯಾಕೆ? [§ 1 ಕೊರಿ 1:23 ]ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ?
12. [* ಗಲಾ. 5:10, 2:4 ]ನಿಮ್ಮನ್ನು ಕಳವಳಪಡಿಸುವವರು ತಮ್ಮನೇ ತಾವು [† ಕಸಿ ಮಾಡುವುದು ]ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು. [PE]
13. [PS]ಸಹೋದರರೇ, [‡ ಗಲಾ. 5:1 ]ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ [§ 1 ಪೇತ್ರ. 2:1; ಯೂದ. 4 ]ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, [* 1 ಕೊರಿ 9:19 ]ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
14. “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.
15. ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ. [PE]
16. {#1ಆತ್ಮನ ಫಲವು ಮತ್ತು ದೇಹದ ದುಷ್ಫಲಗಳು } [PS]ನಾನು ಹೇಳುವುದೇನಂದರೆ [† ಗಲಾ. 5:24,25; ರೋಮಾ. 8:4 ]ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು [‡ ಎಫೆ 2:3 ]ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.
17. ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. [§ ರೋಮಾ. 7:15, 18-20 ]ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.
18. ಆದರೆ [* ರೋಮಾ. 8:14 ]ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ [† ರೋಮಾ. 7:4 ]ಧರ್ಮಶಾಸ್ತ್ರಕ್ಕೆ ಅಧೀನರಲ್ಲ. [PE]
19. [PS]ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,
20. ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, [‡ 1 ಕೊರಿ 11:19 ]ಭಿನ್ನಮತ,
21. ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. [§ ಕೊಲೊ 3:6; 1 ಕೊರಿ 6:9 ]ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ. [PE]
22. [PS]ಆದರೆ [* ರೋಮಾ. 7:4; 8:5; ಎಫೆ 5:9 ]ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, [† 2 ಕೊರಿ 6:6 ]ದಯೆ, ಪರೋಪಕಾರ, ನಂಬಿಕೆ,
23. ಸಾಧುತ್ವ, [‡ ಅ. ಕೃ. 24:5; 2 ಪೇತ್ರ 1:6 ]ಶಮೆದಮೆ ಇಂಥವುಗಳೇ. [§ 1 ತಿಮೊ. 1:9 ]ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
24. ಕ್ರಿಸ್ತ ಯೇಸುವಿನಲ್ಲಿರುವವರು [* ಗಲಾ. 5:16; ರೋಮಾ. 6:6 ]ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. [PE]
25. [PS] [† ಗಲಾ. 5:16 ]ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.
26. [‡ ಫಿಲಿ. 2:3 ]ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. [PE]