ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಗಲಾತ್ಯದವರಿಗೆ
1. {ಪರಸ್ಪರ ಭಾರವನ್ನು ಹೊತ್ತುಕೊಳ್ಳಿರಿ} [PS] ಸಹೋದರರೇ, [* 2 ಕೊರಿ 2:7, ಇಬ್ರಿ. 12:13, ಯಾಕೋಬ. 5:19] ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ [† ರೋಮಾ. 15:1] ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
2. ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ [‡ ಧರ್ಮಶಾಸ್ತ್ರವನ್ನು, ಗಲಾ. 5:14] ನೀತಿನಿಯಮಗಳನ್ನು ನೆರವೇರಿಸಿರಿ.
3. [§ 1 ಕೊರಿ 3:18] ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.
4. [* 1 ಕೊರಿ 11:28, 2 ಕೊರಿ 13:5] ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.
5. ಏಕೆಂದರೆ [† ರೋಮಾ. 14:12] ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು. [PE][PS]
6. [‡ ರೋಮಾ. 15:27, 1 ಕೊರಿ 9:11] ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.
7. ಮೋಸಹೋಗಬೇಡಿರಿ. [§ ಯೋಬ. 13:9] ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. [* 2 ಕೊರಿ 9:6] ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
8. ತನ್ನ [† ಶರೀರಭಾವದಲ್ಲಿ, ಹೋಶೇ. 8:7, ಯೋಬ. 4:8] ಶರೀರಭಾವವನ್ನು ಕುರಿತು ಬಿತ್ತುವವನು [‡ ರೋಮಾ. 6:21] ಆ ಭಾವದಿಂದ ನಾಶವನ್ನು ಕೊಯ್ಯುವನು. [§ ಯಾಕೋಬ. 3:18] ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
9. [* 2 ಥೆಸ. 3:13, 1 ಕೊರಿ 15:58] ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
10. ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ [† ಎಫೆ 2:19, ಇಬ್ರಿ. 3:6] ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ. [PS]
11. {ಕಡೆ ಎಚ್ಚರಿಕೆಗಳು ಮತ್ತು ವಂದನೆಗಳು} [PS] ಇಗೋ ನೋಡಿರಿ, [‡ 1 ಕೊರಿ 16:21] ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ.
12. ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. [§ ಗಲಾ. 5:11] ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.
13. ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
14. [* 1 ಕೊರಿ 2:2, ಫಿಲಿ. 3:3, 7-8] ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ [† ರೋಮಾ. 6:6] ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.
15. [‡ ರೋಮಾ. 2:28, ಗಲಾ. 5:6] ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ [§ ಯೋಹಾ 3:5-7, ರೋಮಾ. 6:4, 2 ಕೊರಿ 5:17] ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.
16. ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ [* ಗಲಾ. 3:7-9,29; ರೋಮಾ. 2:29, 4:12, 9:6-8] ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ. [PE][PS]
17. ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, [† ಯೆಶಾ 44:5, ಯೆಹೆ. 9:4, ಪ್ರಕ 13:16] ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ.
18. ಸಹೋದರರೇ, [‡ ಫಿಲೆ. 25, ರೋಮಾ. 16:20] ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು [§ 2 ತಿಮೊ. 4:22] ನಿಮ್ಮ ಆತ್ಮದೊಂದಿಗಿರಲಿ. ಆಮೆನ್. [PE]

ಟಿಪ್ಪಣಿಗಳು

No Verse Added

ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 6
1 2 3 4 5 6
ಗಲಾತ್ಯದವರಿಗೆ 6:20
ಪರಸ್ಪರ ಭಾರವನ್ನು ಹೊತ್ತುಕೊಳ್ಳಿರಿ 1 ಸಹೋದರರೇ, * 2 ಕೊರಿ 2:7, ಇಬ್ರಿ. 12:13, ಯಾಕೋಬ. 5:19 ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ † ರೋಮಾ. 15:1 ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2 ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ಧರ್ಮಶಾಸ್ತ್ರವನ್ನು, ಗಲಾ. 5:14 ನೀತಿನಿಯಮಗಳನ್ನು ನೆರವೇರಿಸಿರಿ. 3 § 1 ಕೊರಿ 3:18 ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ. 4 * 1 ಕೊರಿ 11:28, 2 ಕೊರಿ 13:5 ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ. 5 ಏಕೆಂದರೆ ರೋಮಾ. 14:12 ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು. 6 ರೋಮಾ. 15:27, 1 ಕೊರಿ 9:11 ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು. 7 ಮೋಸಹೋಗಬೇಡಿರಿ. § ಯೋಬ. 13:9 ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. * 2 ಕೊರಿ 9:6 ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. 8 ತನ್ನ ಶರೀರಭಾವದಲ್ಲಿ, ಹೋಶೇ. 8:7, ಯೋಬ. 4:8 ಶರೀರಭಾವವನ್ನು ಕುರಿತು ಬಿತ್ತುವವನು ‡ ರೋಮಾ. 6:21 ಆ ಭಾವದಿಂದ ನಾಶವನ್ನು ಕೊಯ್ಯುವನು. § ಯಾಕೋಬ. 3:18 ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. 9 * 2 ಥೆಸ. 3:13, 1 ಕೊರಿ 15:58 ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು. 10 ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಎಫೆ 2:19, ಇಬ್ರಿ. 3:6 ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ. ಕಡೆ ಎಚ್ಚರಿಕೆಗಳು ಮತ್ತು ವಂದನೆಗಳು 11 ಇಗೋ ನೋಡಿರಿ, 1 ಕೊರಿ 16:21 ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ. 12 ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. § ಗಲಾ. 5:11 ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ. 13 ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ. 14 * 1 ಕೊರಿ 2:2, ಫಿಲಿ. 3:3, 7-8 ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ † ರೋಮಾ. 6:6 ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು. 15 ರೋಮಾ. 2:28, ಗಲಾ. 5:6 ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ § ಯೋಹಾ 3:5-7, ರೋಮಾ. 6:4, 2 ಕೊರಿ 5:17 ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು. 16 ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ * ಗಲಾ. 3:7-9,29; ರೋಮಾ. 2:29, 4:12, 9:6-8 ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ. 17 ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ಯೆಶಾ 44:5, ಯೆಹೆ. 9:4, ಪ್ರಕ 13:16 ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ. 18 ಸಹೋದರರೇ, ಫಿಲೆ. 25, ರೋಮಾ. 16:20 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು § 2 ತಿಮೊ. 4:22 ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 6
1 2 3 4 5 6
Common Bible Languages
West Indian Languages
×

Alert

×

kannada Letters Keypad References