1. {#1ನೋಹನ ಮಕ್ಕಳ ಸಂತಾನ [BR]1ಪೂರ್ವ 1:5-23 }
2. [PS]ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು. [PE]
3. [PS]ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು. [PE]
4. [PS]ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು. [PE][PS]ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.
5. ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು. [PE]
6.
7. [PS]ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು. [PE]
8. [PS]ಕೂಷನ ಸಂತಾನದವರು ಯಾರೆಂದರೆ - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬುವವರು. [PE][PS]ಕೂಷನು ನಿಮ್ರೋದನನ್ನು ಪಡೆದನು. ಅವನು ಭೂಮಿಯ ಮೇಲಿನ ಮೊದಲನೆಯ ಪರಾಕ್ರಮಶಾಲಿಯಾಗಿದ್ದನು.
9. ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.
10. ಶಿನಾರ್ ದೇಶದಲ್ಲಿರುವ [* ಬಾಬಿಲೋನ್ ]ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.
11. ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,
12. ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ. [PE]
13. [PS]ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು.
14. ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು. [PE]
15. [PS]ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.
16. ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,
17. ಹಿವ್ವಿಯರು, ಅರ್ಕಿಯರು, ಸೀನಿಯರು ಕಾನಾನನಿಂದ ಹುಟ್ಟಿದರು.
18. ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು. [PE]
19.
20. [PS]ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ. [PE]
21. [PS]ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. [PE]
22. [PS]ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು. [PE]
23. [PS]ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು. [PE]
24. [PS]ಅರಾಮ್ ಸಂತಾನದವರು - ಊಸ್, ಹೂಲ್, ಗೆತೆರ್, ಮಷ್ ಎಂಬವರು. [PE]
25. [PS]ಅರ್ಪಕ್ಷದನಿಂದ ಶೆಲಹನೂ, ಶೆಲಹನಿಂದ ಎಬರನೂ ಹುಟ್ಟಿದನು. [PE]
26. [PS]ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್. [PE][PS]ಯೊಕ್ತಾನನ ಸಂತಾನದವರು - ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್, ಯೆರಹ,
27. ಹದೋರಾಮ್, ಊಜಾಲ್, ದಿಕ್ಲಾ,
28. ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು.
29. ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು. [PE]
30.
31. [PS]ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು. [PE]
32. [PS]ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು. [PE][PS]ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ. [PE]