1. {ಅಬ್ರಾಮನು ಲೋಟನನ್ನು ಅಗಲಿದ್ದು} PS ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು.
|
4. ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ
|
7. ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು. PEPS
|
8. ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.
|
9. ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು. PEPS
|
10. ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.
|
12. ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.
|
14. {ಅಬ್ರಾಮನು ಹೆಬ್ರೋನಿಗೆ ಬಂದದ್ದು} PS ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.
|
16. ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.
|
18. ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು. PE
|