1. {ಇಷ್ಮಾಯೇಲನ ಜನನ} PS ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.
|
2. ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.
|
3. ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು. PEPS
|
4. ಅವನು ಹಾಗರಳನ್ನು ಸಂಗಮಿಸಲು ಆಕೆಯು ಬಸುರಾದಳು. ತಾನು ಬಸುರಾದೆನೆಂದು ತಿಳಿದುಕೊಂಡಾಗ ಅವಳು ತನ್ನ ಯಜಮಾನಿಯನ್ನು ತಾತ್ಸಾರ ಮಾಡತೊಡಗಿದಳು.
|
5. ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು. PEPS
|
6. ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು. PEPS
|
8. “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು. PEPS
|
10. ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು.
|
11. ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ * ದೇವರು ಕೇಳುವನು ಇಷ್ಮಾಯೇಲ್ ಎಂದು ಹೆಸರಿಡಬೇಕು.
|
12. ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ † ಅಥವಾ ಅವನು ಅವನ ಸಂಬಂಧಿಕರ ಪೂರ್ವದಿಕ್ಕಿನಲ್ಲಿ ವಾಸಿಸುವವನು. ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು. PEPS
|
13. ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ ‡ ಎಲ್ ರೋಹಿ. ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.
|
14. ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ § ನನ್ನನ್ನು ನೋಡುವ ಜೀವಸ್ವರೂಪನಾದ ದೇವರ ಬಾವಿ. ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ. PEPS
|